June 12, 2026
Friday, June 12, 2026
spot_img

ಧರ್ಮಸ್ಥಳ ಕೇಸ್‌ನಲ್ಲಿ ಪ್ರಕಾಶ್‌ ರಾಜ್‌ ನೇಮ್‌ | ಹೆಸರು ಪ್ರಸ್ತಾಪ ಆದ ಕೂಡಲೇ ಕ್ರಿಮಿನಲ್ ಅಲ್ಲ: ಪ್ರಿಯಾಂಕ್‌ ಖರ್ಗೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಧರ್ಮಸ್ಥಳದ ಮಾಸ್‌ ಬರಿಯಲ್‌ ಪ್ರಕರಣದಲ್ಲಿ ನಟ ಪ್ರಕಾಶ್‌ ರಾಜ್‌ ಹೆಸರು ಕೇಳಿಬಂದಿದೆ. ಈ ಬಗ್ಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಮಾತನಾಡಿದ್ದು, ಹೆಸರು ಬಂದ ತಕ್ಷಣ ಅವರು ಕ್ರಿಮಿನಲ್‌ ಅಂತ ಅರ್ಥ ಅಲ್ಲ. ಎಸ್‌ಐಟಿ ಎಲ್ಲ ಕೆಲಸವನ್ನು ಮಾಡುತ್ತಿದೆ. ಮಾಧ್ಯಮದ ಮುಂದೆ ಜಾಸ್ತಿ ಮಾತಾಡೋಕೆ ಆಗೋದಿಲ್ಲ ಎಂದು ಹೇಳಿದ್ದಾರೆ.

ಬುರುಡೆ ಕೇಸ್‌ನಲ್ಲಿ ಪ್ರಕಾಶ್‌ ರಾಜ್‌ ಹೆಸರು ಕೇಳಿಬಂದಿತ್ತು. ಇದಕ್ಕೆ ಖುದ್ದು ಪ್ರಕಾಶ್‌ ರಾಜ್‌ ಟ್ವೀಟ್‌ ಮೂಲಕ ಉತ್ತರ ನೀಡಿದ್ದರು. ನಾನೇ ಬಂದು ಉತ್ತರಿಸುತ್ತೇನೆ. ವದಂತಿಗಳ ಬಗ್ಗೆ ಯಾರೂ ತಲೆ ಕೆಡಿಸಿಕೊಳ್ಳಬೇಡಿ.

ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ನನ್ನ ಹೆಸರು ಚರ್ಚೆಯಾಗುತ್ತಿರೋದು ಗಮನಕ್ಕೆ ಬಂದಿದೆ‌. ಇದು ಅತ್ಯಂತ ಸೂಕ್ಷ್ಮವಾದ ವಿಷಯ ಮತ್ತು ಲಕ್ಷಾಂತರ ಭಕ್ತರ ನಂಬಿಕೆಗೆ ನೋವುಂಟು ಮಾಡಬಹುದಾದ ವಿಚಾರ. ಹಾಗಾಗಿ, ಈ ಕುರಿತ ಅನುಮಾನಗಳಿಗೆ ಉತ್ತರಿಸುವುದು ನನ್ನ ಕರ್ತವ್ಯ.

ಸದ್ಯ ನಾನು ದೂರದೂರಿನಲ್ಲಿದ್ದೇನೆ. ಇನ್ನೆರಡು ದಿನಗಳಲ್ಲಿ ನಾನೇ ಸ್ವತಃ ಬಂದು ಮಾಧ್ಯಮ ಮಿತ್ರರ ಮುಖೇನ ಉತ್ತರಿಸುತ್ತೇನೆ. ಅಲ್ಲಿಯವರೆಗೆ ಗಾಳಿಮಾತುಗಳನ್ನು ಮತ್ತು ಕೆಲವು ದುರುಳರು ಈ ಸುದ್ದಿಗೆ ಕಟ್ಟಲೆತ್ನಿಸುತ್ತಿರುವ ರೆಕ್ಕೆ ಪುಕ್ಕಗಳನ್ನು ನಂಬದಿರಿ ಎಂದು ಜನರಲ್ಲಿ ನಟ ಪ್ರಕಾಶ್‌ ರಾಜ್‌ ಮನವಿ ಮಾಡಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !