ಹೊಸದಿಗಂತ ವರದಿ ಬಳ್ಳಾರಿ:
ಶಿವಾಜಿನಗರ ಕ್ಷೇತ್ರದ ಶಾಸಕ ರಿಜ್ವಾನ್ ಹರ್ಷದ್ ಅವರಿಗೆ, ಸಿ.ಎಂ.ಡಿ.ಕೆ.ಶಿವಕುಮಾರ್ ಅವರ ನೇತೃತ್ವದ ನೂತನ ಸರ್ಕಾರದಲ್ಲಿ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿ, ಕಾಂಗ್ರೆಸ್ ಯುವ ಮುಖಂಡ ಫರಾನ್ ನೇತೃತ್ವದಲ್ಲಿ ನಗರದ ಅಧಿದೇವತೆ ಶ್ರೀ ಕನಕ ದುರ್ಗಮ್ಮ ದೇವಾಲಯದ ಶುಕ್ರವಾರ 101 ತೆಂಗಿನಕಾಯಿ ಒಡೆದು, ವಿಶೇಷ ಪೂಜೆ ಸಲ್ಲಿಸಿ, ಅಭಿಮಾನಿಗಳು ಪ್ರಾರ್ಥಿಸಿದರು.
ಹರ್ಷದ್ ಭಾವಚಿತ್ರಕ್ಕೆ ಹಾಲಿನ ಅಭಿಷೇಕ
ನಂತರ ದೇವಾಲಯದ ಎದುರು ಜಮಾಯಿಸಿದ ಕಾಂಗ್ರೆಸ್ ನ ನೂರಾರು ಕಾರ್ಯಕರ್ತರು, ಅಭಿಮಾನಿಗಳು ಶಾಸಕ ಹರ್ಷದ್ ರಿಜ್ವಾನ್ ಅವರ ಭಾವಚಿತ್ರಕ್ಕೆ ಹಾಲಿಭಿಷೇಕ ಮಾಡಿ, ಸಚಿವ ಸ್ಥಾನ ದೊರೆಯಲಿ ಎಂದು ಪ್ರಾರ್ಥಿಸಿದರು.
ಕಾಂಗ್ರೆಸ್ ಕಾರ್ಯಕರ್ತರು, ಅಭಿಮಾನಿಗಳಿಂದ ಭಾರೀ ಬೆಂಬಲ
ಈ ಸಂದರ್ಭದಲ್ಲಿ ಕಾಂಗ್ರೆಸ್ ಯುವ ಮುಖಂಡ ಫರಾನ್ ಅಹ್ಮದ್ ಅವರು ಮಾತನಾಡಿ, ಟ್ರಬಲ್ ಶೂಟರ್, ನೂತನ ಸಿ.ಎಂ.ಡಿ.ಕೆ.ಶಿವಕುಮಾರ್ ಅವರ ನೇತೃತ್ವದ ಸರ್ಕಾರದಲ್ಲಿ ಶಿವಾಜಿನಗರ ಕ್ಷೇತ್ರದ ಶಾಸಕ ರಿಜ್ವಾನ್ ಹರ್ಷದ್ ಅವರಿಗೆ ಸಚಿವ ಸ್ಥಾನ ನೀಡಬೇಕು, ಈ ಬೇಡಿಕೆ ನಮ್ಮದಷ್ಟೇ ಅಲ್ಲ, ನಾಡಿನ ಜನರ ಬೇಡಿಕೆಯಾಗಿದೆ. ಶಾಸಕ ರಿಜ್ವಾನ್ ಹರ್ಷದ್ ಅವರು, ಮುತ್ಸದ್ದಿ ರಾಜಕಾರಣಿ, ಇಲ್ಲಿವರೆಗೆ ಯಾವುದೇ ಕಪ್ಪು ಚುಕ್ಕೆ ಇಲ್ಲದ ಅನುಭವಿ, ಮಾದರಿ ರಾಜಕಾರಣಿ, ಮುಸ್ಲಿಂ ಸಮಾಜದ ಪ್ರಭಾವಿ ನಾಯಕರಾಗಿದ್ದಾರೆ.
ಇದನ್ನೂ ಓದಿ:
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರು ನಮ್ಮ ನೆಚ್ಚಿನ ಜನನಾಯಕ, ಶಾಸಕ ರಿಜ್ವಾನ್ ಹರ್ಷದ್ ಅವರಿಗೆ ಸಚಿವ ಸ್ಥಾನ ನೀಡಬೇಕು. ಇಂತಹ ನಾಯಕರು ಸಚಿವರಾಗುವುದರಿಂದ ಸಮಾಜದ ಅಭಿವೃದ್ಧಿಗೆ ಜೊತೆಗೆ ನಾಡಿನ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುವ ವಿಶ್ವಾಸವಿದೆ ಎಂದರು.
ಹೈಕಮಾಂಡ್‌ಗೆ ಈಗಾಗಲೇ ಹಲವು ಬಾರಿ ಮನವಿ
ಈ ಕುರಿತು ಹೈಕಮಾಂಡ್ ವರಿಷ್ಠರಿಗೆ ಸಾಕಷ್ಟು ಬಾರಿ ಮನವಿ ಮಾಡಿದ್ದು, ಮೊದಲನೇ ಪಟ್ಟಿಯಲ್ಲೇ ಸಚಿವ ಸ್ಥಾನ ದೊರೆಯಬೇಕಿತ್ತು. ಆದರೆ, ನಾನಾ ಕಾರಣಗಳಿಂದ ಅದು ಕೈತಪ್ಪಿದೆ. ಎರಡನೇ ಪಟ್ಟಿಯಲ್ಲಿ ಆದರೂ ವರಿಷ್ಠರು ರಿಜ್ವಾನ್ ಹರ್ಷದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಯುವ ನಾಯಕ ಬಿ.ಎಂ.ಪಾಟೀಲ್ ಸೇರಿದಂತೆ ವಿವಿಧ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಇದ್ದರು.



