ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಮ್ಮು ಮತ್ತು ಕಾಶ್ಮೀರದ ಪೂಂಜ್ ವಲಯದಲ್ಲಿ ನಿಯಂತ್ರಣ ರೇಖೆ ಸಮೀಪ ನಡೆದ ತರಬೇತಿ ಅಭ್ಯಾಸದ ವೇಳೆ ಆಕಸ್ಮಿಕವಾಗಿ ಗ್ರೆನೇಡ್ ಸ್ಫೋಟಗೊಂಡಿದ್ದು, ಇಬ್ಬರು ಭಾರತೀಯ ಸೇನಾ ಸಿಬ್ಬಂದಿ ಗಾಯಗೊಂಡಿದ್ದಾರೆ.
ಎಲ್ಒಸಿಗೆ ಸಮೀಪವಿರುವ ಮಾಲ್ಟಿ ಸೆಕ್ಟರ್ನಲ್ಲಿರುವ ಆರ್ಮಿ ಫಾರ್ವರ್ಡ್ ಪೋಸ್ಟ್ ಬಳಿ ಮಧ್ಯಾಹ್ನ 12.30 ರ ಸುಮಾರಿಗೆ ಈ ಘಟನೆ ನಡೆದಿದೆ. ಸೇನಾ ಸಿಬ್ಬಂದಿ ತರಬೇತಿ ಮತ್ತು ಶಸ್ತ್ರಾಸ್ತ್ರ ನಿರ್ವಹಣೆ ಕವಾಯತುಗಳನ್ನು ನಡೆಸುತ್ತಿದ್ದಾಗ ಆಕಸ್ಮಿಕವಾಗಿ ಗ್ರೆನೇಡ್ ಸ್ಫೋಟಗೊಂಡು ಇಬ್ಬರು ಸೈನಿಕರು ಗಾಯಗೊಂಡಿದ್ದಾರೆ.
ಸಿಬ್ಬಂದಿಯನ್ನು ತಕ್ಷಣ ಚಿಕಿತ್ಸೆಗಾಗಿ ಪೂಂಚ್ನ 425 ಫೀಲ್ಡ್ ಆಸ್ಪತ್ರೆಗೆ ದಾಖಲಿಸಲಾಯಿತು. ಪ್ರಾಥಮಿಕ ವೈದ್ಯಕೀಯ ಚಿಕಿತ್ಸೆ ಪಡೆದ ನಂತರ, ಅವರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ.ಗಾಯಗಳ ತೀವ್ರತೆಯನ್ನು ಪರಿಗಣಿಸಿ, ಭಾರತೀಯ ಸೇನೆಯು ವಾಯು ಮಾರ್ಗದ ಮೂಲಕ ಸ್ಥಳಾಂತರ ವ್ಯವಸ್ಥೆ ಮಾಡಿದ್ದು, ಇಬ್ಬರು ಯೋಧರನ್ನು ವಿಶೇಷ ಚಿಕಿತ್ಸೆಗೆಂದು ಉದಂಪುರದಲ್ಲಿರುವ ನಾರ್ದರ್ನ್ ಕಮಾಂಡ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.



