ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಉಡುಪಿ ಜಿಲ್ಲೆಯ ಪ್ರಮುಖ ದೇವಾಲಯಗಳಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಉಡುಪಿ ಶ್ರೀಕೃಷ್ಣ ಮಠದಲ್ಲಿ ಕೃಷ್ಣನ ದರ್ಶನ ಪಡೆದ ಅವರು, ಶ್ರೀ ಅನಂತೇಶ್ವರ ಹಾಗೂ ಶ್ರೀ ಚಂದ್ರಮೌಳೀಶ್ವರ ದೇವಸ್ಥಾನಗಳಲ್ಲೂ ಪ್ರಾರ್ಥನೆ ಸಲ್ಲಿಸಿದರು.
ವಿವಿಧ ಕ್ಷೇತ್ರಗಳಲ್ಲಿ ಪೂಜೆ
ಇದಾದ ಬಳಿಕ ಕಾಪು ಹೊಸ ಮಾರಿಗುಡಿ ಹಾಗೂ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಭೇಟಿ ನೀಡಿದ ಸಚಿವೆ, ದೇವರ ಆಶೀರ್ವಾದ ಪಡೆದು ಧಾರ್ಮಿಕ ವಿಧಿವಿಧಾನಗಳಲ್ಲಿ ಭಾಗಿಯಾದರು. ಪರ್ಯಾಯ ಶಿರೂರು ಮಠದ ಶ್ರೀ ವೇದವರ್ಧನ ತೀರ್ಥರು ಅವರನ್ನು ಗೌರವಿಸಿ ಆಶೀರ್ವಚನ ನೀಡಿದರು.
ಇದನ್ನೂ ಓದಿ:
ದೇವಾಲಯಗಳ ಆಡಳಿತ ಮಂಡಳಿ ಸದಸ್ಯರು ಹಾಗೂ ಬಿಜೆಪಿ ಮುಖಂಡರೊಂದಿಗೆ ಮಾತುಕತೆ ನಡೆಸಿದ ನಿರ್ಮಲಾ ಸೀತಾರಾಮನ್, ಜಿಲ್ಲಾ ಪ್ರಶಿಕ್ಷಣ ವರ್ಗದಲ್ಲಿ ಭಾಗವಹಿಸುವ ಮೊದಲು ಈ ಆಧ್ಯಾತ್ಮಿಕ ಪ್ರವಾಸ ಕೈಗೊಂಡಿದ್ದು ಗಮನ ಸೆಳೆಯಿತು. ಅವರ ದೇವಾಲಯ ಭೇಟಿ ಭಕ್ತರಲ್ಲಿ ವಿಶೇಷ ಆಸಕ್ತಿ ಮೂಡಿಸಿತು.



