June 13, 2026
Saturday, June 13, 2026
spot_img

ಕೇರಳ ಸಿಎಂ ಕುಟುಂಬಕ್ಕೆ ಜೀವ ಬೆದರಿಕೆ: ಕೆಲವೇ ಗಂಟೆಗಳಲ್ಲಿ ಆರೋಪಿ ಅರೆಸ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೇರಳ ಮುಖ್ಯಮಂತ್ರಿ ವಿ.ಡಿ. ಸತೀಶನ್ ಹಾಗೂ ಅವರ ಕುಟುಂಬಕ್ಕೆ ಜೀವ ಬೆದರಿಕೆ ಹಾಕಿದ ಆರೋಪದಡಿ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಅತ್ತಿಂಗಲ್ ನಿವಾಸಿ ಸೋನಿ ಥಾಮಸ್ ಎಂಬಾತ ಫೋನ್ ಮೂಲಕ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ.

ಕಂಟ್ರೋಲ್ ರೂಂಗೆ ಬಂದ ಬೆದರಿಕೆ ಕರೆ

ಶುಕ್ರವಾರ ಸಂಜೆ ಪೊಲೀಸ್ ಕಮಾಂಡ್ ಮತ್ತು ಕಂಟ್ರೋಲ್ ರೂಂಗೆ ಕರೆ ಮಾಡಿದ ಆರೋಪಿ, ಮುಖ್ಯಮಂತ್ರಿ ಮತ್ತು ಅವರ ಕುಟುಂಬದ ವಿರುದ್ಧ ಗಂಭೀರ ಬೆದರಿಕೆ ಒಡ್ಡಿದ್ದಾನೆ. ಬಳಿಕ ಮತ್ತೆ ಕರೆ ಮಾಡಿ ಪೊಲೀಸ್ ಸಿಬ್ಬಂದಿಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ:

ಕೆಲವೇ ಗಂಟೆಗಳಲ್ಲಿ ಆರೋಪಿ ವಶಕ್ಕೆ

ಕರೆ ಬಂದ ತಕ್ಷಣ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಮೊಬೈಲ್ ಸಂಖ್ಯೆಯ ಆಧಾರದಲ್ಲಿ ತನಿಖೆ ನಡೆಸಿ ಆರೋಪಿ ಇರುವ ಸ್ಥಳವನ್ನು ಪತ್ತೆಹಚ್ಚಿದರು. ಶನಿವಾರ ಬೆಳಗ್ಗೆ ಅತ್ತಿಂಗಲ್‌ನಲ್ಲಿ ಸೋನಿ ಥಾಮಸ್‌ನನ್ನು ಬಂಧಿಸಲಾಗಿದೆ.

ಪ್ರಾಥಮಿಕ ತನಿಖೆಯಲ್ಲಿ, ಆರೋಪಿ ಕರೆ ಮಾಡುವ ವೇಳೆ ಮದ್ಯದ ಅಮಲಿನಲ್ಲಿದ್ದ ಎನ್ನುವುದು ಬೆಳಕಿಗೆ ಬಂದಿದೆ. ಘಟನೆಯ ಕುರಿತು ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !