October 11, 2026
Sunday, October 11, 2026
spot_img

WEATHER | ಗುಡುಗು-ಬಿರುಗಾಳಿಯೊಂದಿಗೆ ವರುಣನ ಎಂಟ್ರಿ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಶನಿವಾರ ರಾತ್ರಿ ಬೆಂಗಳೂರಿನ ವಿವಿಧ ಪ್ರದೇಶಗಳಲ್ಲಿ ಉತ್ತಮ ಮಳೆಯಾಗಿದೆ. ಇಂದು ಕೂಡ ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿಯಲ್ಲಿ ಸಾಧಾರಣ ಮಳೆಯ ನಿರೀಕ್ಷೆ

ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಅನೇಕ ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕೆಲವೆಡೆ ಮೋಡ ಕವಿದ ವಾತಾವರಣ ಮುಂದುವರಿಯುವ ನಿರೀಕ್ಷೆಯಿದೆ.

ಇದನ್ನೂ ಓದಿ:

ಎಂಟು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬೀದರ್, ಕಲಬುರಗಿ, ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಗಂಟೆಗೆ 30 ರಿಂದ 40 ಕಿ.ಮೀ ವೇಗದ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರಿಗೂ ಮಳೆಯ ಎಚ್ಚರಿಕೆ

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಸೇರಿದಂತೆ ಮೈಸೂರು, ಮಂಡ್ಯ, ಹಾಸನ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು, ತುಮಕೂರು, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ಇತರ ಜಿಲ್ಲೆಗಳಲ್ಲೂ ಗುಡುಗು ಸಹಿತ ಮಳೆಯ ಮುನ್ಸೂಚನೆ ನೀಡಲಾಗಿದೆ.

Must Read