June 14, 2026
Sunday, June 14, 2026
spot_img

ಕೊ*ಲೆ ಪ್ರಕರಣ ಸ್ಥಳ ಮಹಜರು ವೇಳೆ ಹೈಡ್ರಾಮಾ: ಶಿವಮೊಗ್ಗದಲ್ಲಿ ಆರೋಪಿ ಮೇಲೆ ಫೈರಿಂಗ್ ಮಾಡಿದ ಪೊಲೀಸರು!

ಹೊಸದಿಗಂತ ವರದಿ ಶಿವಮೊಗ್ಗ:

ರೌಡಿಶೀಟರ್ ನರಸಿಂಹ ಕೊಲೆ ಆರೋಪಿಗಳಲ್ಲಿ ಒಬ್ಬನಾದ ಮಧು ಯಾನೆ ಹನುಮಂತು ಭಾನುವಾರ ಬೆಳಗ್ಗೆ ಸ್ಥಳ‌ಮಹಜರು ವೇಳೆ ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದು, ಪೊಲೀಸರು ಗುಂಡು ಹಾರಿಸಿ ಆತನನ್ನು ಬಂಧಿಸಿದ್ದಾರೆ.

ಘಟನೆ ವಿವರ

ಗಾಂಧಿ ಬಜಾರ್ ನ ಲಷ್ಕರ್ ಮೋಹಲ್ಲಾದಲ್ಲಿ ಜೂ.12 ರಂದು‌ಸಂಜೆ ನರಸಿಂಹನನ್ನು ಹತ್ಯೆ ಮಾಡಲಾಗಿತ್ತು. ಈ ಸಂಬಂಧ ಐವರನ್ನು ಪೊಲಿಸರು ಬಂಧಿಸಿದ್ದರು. ಭಾನುವಾರ ಬೆಳಗ್ಗೆ ಸ್ಥಳ ಮಹಜರ್ ಗೆ ಹೊಳೆಬೆನವಳ್ಳಿಗೆ ಕರೆದುಕೊಂಡು ಹೋಗಿದ್ದಾಗ ಆರೋಪಿ ಮಧು ಪೊಲೀಸ್ ಸಿಬ್ಬಂದಿ ಅಂಜನಪ್ಪ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲೆತ್ನಿಸಿದಾಗ ಕಾಲಿಗೆ ಗುಂಡು ಹೊಡೆದು ಬಂಧಿಸಲಾಗಿದೆ.

ಬಳಿಕ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಜಿಲ್ಲಾ ರಕ್ಷಣಾಧಿಕಾರಿ ಬಿ. ನಿಖಿಲ್ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !