June 17, 2026
Wednesday, June 17, 2026
spot_img

NEW RECORD | ಟಿ20 ಕ್ರಿಕೆಟ್‌ನಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ದೀಪ್ತಿ ಶರ್ಮಾ, ಒಟ್ಟಾರೆ 166 ವಿಕೆಟ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಭಾರತದ ಆಲ್‌ರೌಂಡರ್‌ ದೀಪ್ತಿ ಶರ್ಮಾ ಅಂತಾರಾಷ್ಟ್ರೀಯ ಮಹಿಳಾ ಟಿ20 ಕ್ರಿಕೆಟ್‌ನಲ್ಲಿ ಹೊಸ ಇತಿಹಾಸ ಸೃಷ್ಟಿ ಮಾಡಿದ್ದಾರೆ.

ನಿನ್ನೆ ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆದ ಐಸಿಸಿ ಮಹಿಳಾ ಟಿ20 ವಿಶ್ವಕಪ್‌ನ ಆರನೇ ಪಂದ್ಯದಲ್ಲಿ ದೀಪ್ತಿ ಸ್ಪಿನ್ನಿಂದ ಮೋಡಿ ಮಾಡಿದ್ದು, ಪಾಕಿಸ್ತಾನವನ್ನು ಉರುಳಿಸಿ ಹೊಸ ದಾಖಲೆ ನಿರ್ಮಿಸಿದ್ದಾರೆ.

ದೀಪ್ತಿ ಶರ್ಮಾ ಮಹಿಳಾ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ ಇತಿಹಾಸದಲ್ಲೇ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎಂಬ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. ತಮ್ಮ ವೃತ್ತಿ ಜೀವನದ 166ನೇ ವಿಕೆಟ್‌ ಪಡೆಯುವ ಮೂಲಕ ಥಾಯ್ಲೆಂಡ್‌ನ ಸ್ಪಿನ್ನರ್‌ ಥಿಪಾಟ್ಚಾ ಪುತ್ತವಾಂಗ್‌ ಅವರ ಜಾಗತಿಕ ದಾಖಲೆಯನ್ನು ಮುರಿದಿದ್ದಾರೆ.

ಮಹಿಳಾ ಟಿ20 ವಿಶ್ವಕಪ್ ಇತಿಹಾಸದಲ್ಲಿ ಭಾರತದ ಬೌಲರ್ ಒಬ್ಬರು ದಾಖಲಿಸಿದ ಅತ್ಯುತ್ತಮ ಬೌಲಿಂಗ್ ಪ್ರದರ್ಶನ (5/10) ಇದಾಗಿದೆ.

ನಿನ್ನೆ ನಡೆದ ಪಂದ್ಯದಲ್ಲಿ ದೀಪ್ತಿ ಕೇಲವ 10 ರನ್ ನೀಡಿ 5 ಪ್ರಮುಖ ವಿಕೆಟ್ ಕಸಿದುಕೊಂಡಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !