September 6, 2026
Sunday, September 6, 2026
spot_img

ರಾಮನಗರ ಕ್ಷೇತ್ರದ ಶಾಸಕ ಇಕ್ಬಾಲ್‌ ಹುಸೇನ್‌ ಆಸ್ಪತ್ರೆಗೆ ದಾಖಲು, ಸಿಎಂ ಡಿಕೆಶಿ ಭೇಟಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಮನಗರ ಕ್ಷೇತ್ರದ ಶಾಸಕ ಇಕ್ಬಾಲ್‌ ಹುಸೇನ್‌ ಅನಾರೋಗ್ಯದಿಂದ ಆಸ್ಪತ್ರೆ ಸೇರಿದ್ದಾರೆ.

ಹೃದಯದಲ್ಲಿ ಬ್ಲಾಕೇಜ್‌ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ವೈದೇಹಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಹಿಂದೆಯೇ ಹಾರ್ಟ್‌ ಬ್ಲಾಕೇಜ್‌ ಬಗ್ಗೆ ಮಾಹಿತಿ ಇದ್ದು, ವೈದ್ಯರು ಸ್ಟಂಟ್‌ ಹಾಕಿಸಿಕೊಳ್ಳಬೇಕು ಎಂದು ಸೂಚನೆ ನೀಡಿದ್ದರು. ಇದರ ಮಧ್ಯೆಯೇ ಇಂದು ಬಿಪಿಯಲ್ಲಿ ವ್ಯತ್ಯಾಸ ಕಾಣಿಸಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಇನ್ನೇನು ಕೆಲವೇ ಸಮಯದಲ್ಲಿ ಸಿಎಂ ಡಿ.ಕೆ. ಶಿವಕುಮಾರ್‌ ಆಸ್ಪತ್ರೆಗೆ ಭೇಟಿ ನೀಡಿ ಯೋಗಕ್ಷೇಮ ವಿಚಾರಿಸಲಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !