June 15, 2026
Monday, June 15, 2026
spot_img

12 ವರ್ಷಗಳ ಜನಪರ ಆಡಳಿತದಿಂದ ಇತಿಹಾಸ ನಿರ್ಮಿಸಿದ ಪ್ರಧಾನಿ ಮೋದಿ: ಸಿ.ಟಿ. ರವಿ

ಹೊಸದಿಗಂತ ವರದಿ ಬಳ್ಳಾರಿ:

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕಳೆದ 12 ವರ್ಷಗಳಲ್ಲಿ ಜನಪರ ಹಾಗೂ ಅಭಿವೃದ್ಧಿ ಕೇಂದ್ರಿತ ಆಡಳಿತ ನೀಡುವ ಮೂಲಕ ದೇಶದ ಇತಿಹಾಸದಲ್ಲಿ ಹೊಸ ಅಧ್ಯಾಯ ಬರೆದಿದ್ದಾರೆ ಎಂದು ಮಾಜಿ ಸಚಿವ ಸಿ.ಟಿ. ರವಿ ಹೇಳಿದರು.

ನಗರದ ಬಿಜೆಪಿ ಕಚೇರಿಯಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2014ರ ಹಿಂದಿನ ಪರಿಸ್ಥಿತಿ ಹಾಗೂ ಇಂದಿನ ಅಭಿವೃದ್ಧಿಯನ್ನು ಹೋಲಿಸಿದರೆ ಮೋದಿ ನೇತೃತ್ವದ ಸರ್ಕಾರ ದೇಶಕ್ಕೆ ನೀಡಿರುವ ಕೊಡುಗೆ ಸ್ಪಷ್ಟವಾಗಿ ಗೋಚರಿಸುತ್ತದೆ ಎಂದರು.

ಕೇಂದ್ರ ಯೋಜನೆಗಳಿಂದ ಕೋಟ್ಯಂತರ ಜನರಿಗೆ ಲಾಭ

ಜನಧನ್ ಯೋಜನೆಯಡಿ ಕೋಟ್ಯಂತರ ಬ್ಯಾಂಕ್ ಖಾತೆಗಳು ತೆರೆಯಲ್ಪಟ್ಟಿದ್ದು, ಸರ್ಕಾರದ ಸೌಲಭ್ಯಗಳು ನೇರವಾಗಿ ಫಲಾನುಭವಿಗಳ ಖಾತೆಗೆ ತಲುಪುವ ವ್ಯವಸ್ಥೆ ರೂಪಿಸಲಾಗಿದೆ. ಉಜ್ವಲ ಯೋಜನೆಯಿಂದ ಹೊಗೆರಹಿತ ಅಡುಗೆ ಮನೆಗಳ ಕನಸು ನನಸಾಗಿದ್ದು, ಉಚಿತ ಆಹಾರ ಧಾನ್ಯ ಯೋಜನೆಯಡಿ 81 ಕೋಟಿ ಜನರಿಗೆ ಮಾಸಿಕವಾಗಿ ಅಕ್ಕಿ ವಿತರಿಸಲಾಗುತ್ತಿದೆ ಎಂದು ತಿಳಿಸಿದರು.

ರೈತರಿಗೆ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ವಾರ್ಷಿಕ ಆರ್ಥಿಕ ನೆರವು ನೀಡಲಾಗುತ್ತಿದೆ. ಜಲಜೀವನ್ ಮಿಷನ್ ಮೂಲಕ ಗ್ರಾಮೀಣ ಪ್ರದೇಶಗಳಿಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲಾಗಿದೆ. ಶಿಕ್ಷಣ, ಆರೋಗ್ಯ, ಸಾರಿಗೆ, ರೈಲ್ವೆ ಹಾಗೂ ಕೈಗಾರಿಕಾ ಕ್ಷೇತ್ರಗಳ ಅಭಿವೃದ್ಧಿಗೂ ಕೇಂದ್ರ ಸರ್ಕಾರ ಆದ್ಯತೆ ನೀಡಿದೆ ಎಂದು ಹೇಳಿದರು.

ಇದನ್ನೂ ಓದಿ:

ಬೆಲೆ ಏರಿಕೆ ನಿಯಂತ್ರಣದಲ್ಲಿ ಇದೆ

ಜಾಗತಿಕ ಯುದ್ಧ ಮತ್ತು ಅಂತಾರಾಷ್ಟ್ರೀಯ ಪರಿಸ್ಥಿತಿಗಳ ಪರಿಣಾಮ ಹಲವು ದೇಶಗಳಲ್ಲಿ ಬೆಲೆ ಏರಿಕೆ ಹೆಚ್ಚಾಗಿದ್ದರೂ, ಭಾರತದಲ್ಲಿ ಅದು ನಿಯಂತ್ರಣದಲ್ಲಿದೆ. ಮೋದಿ ಸರ್ಕಾರದ ಸಮರ್ಥ ಆಡಳಿತದಿಂದ ದೇಶದ ಆರ್ಥಿಕ ಸ್ಥಿತಿ ಬಲಗೊಂಡಿದೆ ಎಂದು ಅವರು ಅಭಿಪ್ರಾಯಪಟ್ಟರು.

ಮತದಾರರ ಪಟ್ಟಿ ಶುದ್ಧೀಕರಣಕ್ಕೆ ಬೆಂಬಲ

ಮತದಾರರ ಪಟ್ಟಿಯಲ್ಲಿ ಮೃತಪಟ್ಟವರು, ನಕಲಿ ದಾಖಲೆಗಳ ಆಧಾರದ ಮೇಲೆ ಹೆಸರು ಸೇರಿಸಿಕೊಂಡವರು ಹಾಗೂ ಒಂದಕ್ಕಿಂತ ಹೆಚ್ಚು ಕಡೆಗಳಲ್ಲಿ ಹೆಸರು ಹೊಂದಿರುವವರನ್ನು ತೆಗೆದುಹಾಕುವ ಪ್ರಕ್ರಿಯೆಯೇ ಎಸ್‌ಐಆರ್ ಎಂದು ಸಿ.ಟಿ. ರವಿ ಹೇಳಿದರು. ಇದು ಹೊಸ ಪ್ರಕ್ರಿಯೆಯಲ್ಲ, ಸ್ವಾತಂತ್ರ್ಯಾನಂತರ ಹಲವು ಬಾರಿ ನಡೆದಿರುವ ಕ್ರಮವಾಗಿದೆ. ಇದರ ವಿರುದ್ಧ ಅಪಪ್ರಚಾರ ನಡೆಸುವವರು ದೇಶದಲ್ಲಿ ಗೊಂದಲ ಸೃಷ್ಟಿಸಲು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದರು.

ಈ ಸಂದರ್ಭದಲ್ಲಿ ಎಂಎಲ್‌ಸಿ ವೈ.ಎಂ. ಸತೀಶ್, ಮಾಜಿ ಶಾಸಕ ಗಾಲಿ ಸೋಮಶೇಖರ್ ರೆಡ್ಡಿ, ಬಿಜೆಪಿ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ಮೊಕ, ಮಾಜಿ ಶಾಸಕ ಎಂ.ಎಸ್. ಸೋಮಲಿಂಗಪ್ಪ, ಮಾಜಿ ಸಂಸದ ಸಣ್ಣ ಫಕೀರಪ್ಪ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !