June 20, 2026
Saturday, June 20, 2026
spot_img

ಬೆಂಕಿಯ ಕೆನ್ನಾಲಿಗೆಗೆ ಹೊತ್ತಿ ಉರಿದ ಪಬ್: ಇಬ್ಬರು ಸಜೀವ ದಹನ, ಹಲವರಿಗೆ ಗಾಯ

ಹೊಸದಿಗಂತ ವರದಿ ಬೆಳಗಾವಿ:

ಮೈಸೂರು ನಗರದಲ್ಲಿ ಮತ್ತೊಂದು ದುರಂತ ಸಂಭವಿಸಿದ್ದು, ರಿಂಗ್ ರಸ್ತೆಯ ಸಮೀಪದ ಖಾಸಗಿ ಪಬ್‌ನಲ್ಲಿ ಕಾಣಿಸಿಕೊಂಡ ಭಾರೀ ಬೆಂಕಿ ಅವಘಡ ಇಬ್ಬರ ಜೀವವನ್ನು ಬಲಿ ಪಡೆದಿದೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಕ್ಷಣಾರ್ಧದಲ್ಲಿ ವ್ಯಾಪಿಸಿದ ಬೆಂಕಿ

ದಟ್ಟಗಳ್ಳಿ ನಾಲ್ಕನೇ ಹಂತದ ಸಮೀಪ ಇರುವ ಫಾಕ್ಸ್ ಜೆನ್ ಪಬ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಕೆಲವೇ ನಿಮಿಷಗಳಲ್ಲಿ ಇಡೀ ಕಟ್ಟಡವನ್ನು ಆವರಿಸಿತು. ಬೆಂಕಿಯ ತೀವ್ರತೆ ಹೆಚ್ಚಿದ ಪರಿಣಾಮ ಪಬ್‌ನೊಳಗಿದ್ದವರಿಗೆ ಹೊರಬರಲು ಸಮಯ ಸಿಗದೇ ದುರಂತ ಸಂಭವಿಸಿದೆ.

ಇದನ್ನೂ ಓದಿ:

ಇಬ್ಬರ ಸಜೀವ ದಹನ

ಅವಘಡದಲ್ಲಿ ಸಾಹೀನ್ ಹಾಗೂ ಪ್ರಕಾಶ್ ಎಂಬ ಇಬ್ಬರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಬೆಂಕಿಯ ಕೆನ್ನಾಲಿಗೆಗೆ ಸಿಲುಕಿದ ಅವರು ಸ್ಥಳದಲ್ಲೇ ಸಾವನ್ನಪ್ಪಿರುವ ಮಾಹಿತಿ ಲಭ್ಯವಾಗಿದೆ. ಘಟನೆಯಲ್ಲಿ ಗಾಯಗೊಂಡ ಏಳು ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ.

ಕಾರಣ ಪತ್ತೆಗೆ ತನಿಖೆ

ಅಗ್ನಿ ಅವಘಡಕ್ಕೆ ನಿಖರ ಕಾರಣ ಏನು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !