June 17, 2026
Wednesday, June 17, 2026
spot_img

ಬೆಳ್ಳಂಬೆಳಗ್ಗೆ ಶಾಕ್‌: ರಾಜ್ಯದ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಬೆಳ್ಳಂಬೆಳಗ್ಗೆ ಲೋಕಾಯುಕ್ತ ಭ್ರಷ್ಟ ಅಧಿಕಾರಿಗಳಿಗೆ ಶಾಕ್‌ ನೀಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ದಾಳಿ ನಡೆಸಿದೆ.

ವಿವಿಧ ಇಲಾಖೆಯ ಅಧಿಕಾರಿಗಳು ಅಕ್ರಮವಾಗಿ ಆಸ್ತಿ ಗಳಿಸಿದ್ದಾರೆ ಎನ್ನುವ ಆರೋಪದ ಹಿನ್ನೆಲೆ ಕಲಬುರಗಿ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು ಸೇರಿ ವಿವಿಧ ಜಿಲ್ಲೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಲಾಗಿದೆ.

ದಾವಣಗೆರೆ ಲೋಕಾಯುಕ್ತ ಎಸ್ಪಿ ಎಂ.ಎಸ್‌ ಕೌಲಾಪುರೆ ನೇತೃತ್ವದಲ್ಲಿ ಮೂರು ಅಧಿಕಾರಿಗಳ 12 ತಂಡ ಏಕಕಾಲಕ್ಕೆ 12 ಕಡೆ ದಾಳಿ ನಡೆಸಿದೆ. ಹುಬ್ಬಳ್ಳಿಯಲ್ಲಿ ಕೆಎಸ್‌ಆರ್‌ಟಿಸಿ (ವಾಯವ್ಯ) ಚೀಫ್‌ ಮೆಕ್ಯಾನಿಕ್‌ ಆಗಿರುವ ಸಿದ್ದೇಶ್ವರ ಹೆಬ್ಬಾಳ್ ಅವರಿಗೆ ಸೇರಿದ ವಿವಿಧ ಸ್ಥಳಗಳಲ್ಲಿ 12 ತಂಡ ದಾಳಿ ನಡೆಸಿದೆ.

ಕಲಬುರಗಿಯ ಪಂಚಾಯತ್‌ ರಾಜ್‌ ನಿವೃತ್ತ ಇಂಜಿನಿಯರ್‌ ಸೂಪರಿಡೆಂಟ್‌, ಚಿಕ್ಕಮಗಳೂರಿನಲ್ಲಿ ಎಸಿಎಫ್‌ ಮೋಹನ್‌, ಕಡೂರಿನಲ್ಲಿ ಶ್ರೀನಿವಾಸ್‌ ಸಹೋದರಿ ಮನೆ ಮೇಲೆ ದಾಳಿ ನಡೆಸಲಾಗಿದೆ. ಲೋಕಾಯುಕ್ತ ಅಧಿಕಾರಿಗಳ ತಂಡ ದಾಖಲೆಗಳನ್ನು ಪರಿಶೀಲಿಸುತ್ತಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !