June 19, 2026
Friday, June 19, 2026
spot_img

ರಾಜ್ಯದ ಜನರೇ ಅಲರ್ಟ್: ಮುಂದಿನ 24 ಗಂಟೆಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ ಮುನ್ಸೂಚನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ಮುಂದಿನ 24 ಗಂಟೆಗಳ ಕಾಲ ವರುಣನ ಅಬ್ಬರ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಪ್ರಮುಖ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಮಳೆಯ ಜೊತೆಗೆ ಕೆಲವು ಪ್ರದೇಶಗಳಲ್ಲಿ ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಬಲವಾದ ಬಿರುಗಾಳಿ ಬೀಸಲಿದ್ದು, ಸಾರ್ವಜನಿಕರು ಜಾಗರೂಕರಾಗಿರಲು ಸೂಚಿಸಲಾಗಿದೆ.

ಈ ಜಿಲ್ಲೆಗಳಿಗೆ ಮಳೆ ಅಲರ್ಟ್!

ಮಲೆನಾಡು ಮತ್ತು ದಕ್ಷಿಣ ಒಳನಾಡಿನ ಪ್ರಮುಖ ಜಿಲ್ಲೆಗಳಾದ:

ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ

ಬೆಂಗಳೂರು ನಗರ ಮತ್ತು ಗ್ರಾಮಾಂತರ

ರಾಮನಗರ, ಮಂಡ್ಯ, ಮೈಸೂರು

ಚಾಮರಾಜನಗರ, ಕೊಡಗು ಮತ್ತು ಹಾಸನ

ಈ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.

ಬೆಂಗಳೂರು ಹವಾಮಾನ ವರದಿ

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರಲಿದ್ದು, ಸಂಜೆ ಅಥವಾ ರಾತ್ರಿಯ ವೇಳೆಗೆ ನಗರದ ಹಲವು ಪ್ರದೇಶಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ನಗರದ ಒಂದೆರಡು ಕಡೆಗಳಲ್ಲಿ ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ತಂಗಾಳಿ ಬೀಸಲಿದ್ದು, ವಾತಾವರಣ ಮತ್ತಷ್ಟು ತಂಪಾಗಲಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !