June 17, 2026
Wednesday, June 17, 2026
spot_img

ಪರಪ್ಪನ ಅಗ್ರಹಾರ ಜೈಲಿಗೆ ಅಟ್ಟಿ: ಸುಳ್ಳು ಸುದ್ದಿ ಹಬ್ಬಿಸಿದವರ ವಿರುದ್ಧ ನಟ ದೊಡ್ಡಣ್ಣ ಗರಂ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇತ್ತೀಚಿನ ದಿನಗಳಲ್ಲಿ ಸೋಶಿಯಲ್ ಮೀಡಿಯಾದಲ್ಲಿ ಸೆಲೆಬ್ರಿಟಿಗಳ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುವವರ ಸಂಖ್ಯೆ ಹೆಚ್ಚಾಗಿದೆ. ಇದಕ್ಕೆ ಬ್ರೇಕ್ ಹಾಕಲು ಈಗ ಸ್ಯಾಂಡಲ್‌ವುಡ್ ಹಿರಿಯ ನಟ ದೊಡ್ಡಣ್ಣ ಅವರು ಖಡಕ್ ಕಾನೂನು ಕ್ರಮಕ್ಕೆ ಮುಂದಾಗಿದ್ದಾರೆ.

ಸ್ಯಾಂಡಲ್‌ವುಡ್ ಹಿರಿಯ ನಟ ದೊಡ್ಡಣ್ಣ ಆಕ್ರೋಶ

ಕಳೆದ ಕೆಲವು ದಿನಗಳ ಹಿಂದೆ ನಟ ದೊಡ್ಡಣ್ಣ ಅವರು ನಿಧನರಾಗಿದ್ದಾರೆ ಎಂಬ ಸುಳ್ಳು ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ವೈರಲ್ ಆಗಿತ್ತು. ಇದರಿಂದ ಆತಂಕಗೊಂಡ ಅಭಿಮಾನಿಗಳು ಮತ್ತು ಆಪ್ತರು ದೊಡ್ಡಣ್ಣ ಅವರಿಗೆ ಕರೆ ಮಾಡಿ ವಿಚಾರಿಸಿದ್ದರು. ಅಂದೇ ವಿಡಿಯೋ ಮೂಲಕ ತಾವು ಆರೋಗ್ಯವಾಗಿರುವುದಾಗಿ ಸ್ಪಷ್ಟನೆ ನೀಡಿದ್ದ ನಟ, ಸುಳ್ಳು ಸುದ್ದಿ ಹಬ್ಬಿಸಿದವರ ವಿರುದ್ಧ ಆಕ್ರೋಶ ಹೊರಹಾಕಿದ್ದರು.

ಸೈಬರ್ ಪೊಲೀಸ್ ಠಾಣೆಗೆ ದೂರು: ಕಿಡಿಗೇಡಿಗಳ ಬೆನ್ನಟ್ಟಿದ ಖಾಕಿ

ತಮ್ಮ ಸಾವಿನ ಸುಳ್ಳು ಸುದ್ದಿ ಹಬ್ಬಿಸಿದ ಕಿಡಿಗೇಡಿಗಳ ವಿರುದ್ಧ ದೊಡ್ಡಣ್ಣ ಅವರು ಇದೀಗ ಅಧಿಕೃತವಾಗಿ ಸೈಬರ್ ಕ್ರೈಮ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. “ಮುಖೇಡಿಗಳ ಹೆಡೆಮುರಿ ಕಟ್ಟಿ ಪರಪ್ಪನ ಅಗ್ರಹಾರ ಜೈಲಿಗೆ ಅಟ್ಟಿ” ಎಂದು ನಟ ದೊಡ್ಡಣ್ಣ ಗುಡುಗಿದ್ದಾರೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸೈಬರ್ ಪೊಲೀಸರು, ಸುಳ್ಳು ಸುದ್ದಿ ಹರಡಿದ ಅಕೌಂಟ್‌ಗಳ ಪತ್ತೆಗೆ ಜಾಲ ಬೀಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !