June 18, 2026
Thursday, June 18, 2026
spot_img

ಐಫೋನ್ 18ಗಾಗಿ ಕಾಯುತ್ತಿದ್ದೀರಾ? ಹಾಗಿದ್ರೆ ಮೊದಲು ಈ ಸುದ್ದಿ ಓದಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸೆಪ್ಟೆಂಬರ್‌ನಲ್ಲಿ ಬಿಡುಗಡೆಯಾಗಲಿರುವ ಐಫೋನ್ 18 ಸರಣಿಯತ್ತ ಜಗತ್ತಿನ ಟೆಕ್ ಪ್ರಿಯರು ಕಣ್ಣಿಟ್ಟಿದ್ದಾರೆ. ಆದರೆ ಹೊಸ ಮಾದರಿಯ ನಿರೀಕ್ಷೆಯಲ್ಲಿರುವ ಗ್ರಾಹಕರಿಗೆ ಆ್ಯಪಲ್ ಮುಖ್ಯಸ್ಥ ಟಿಮ್ ಕುಕ್ ಮಹತ್ವದ ಸೂಚನೆ ನೀಡಿದ್ದಾರೆ. ಮುಂದಿನ ಐಫೋನ್‌ಗಳ ಬೆಲೆಯಲ್ಲಿ ಏರಿಕೆ ಸಂಭವಿಸುವ ಸಾಧ್ಯತೆ ಇದೆ ಎಂದು ಅವರು ಹೇಳಿದ್ದಾರೆ.

ಬೆಲೆ ಹೆಚ್ಚಳಕ್ಕೆ ಟಿಮ್ ಕುಕ್ ಸುಳಿವು

ಉತ್ಪಾದನಾ ವೆಚ್ಚ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಭವಿಷ್ಯದ ಐಫೋನ್‌ಗಳ ದರ ಪರಿಷ್ಕರಣೆ ಅನಿವಾರ್ಯವಾಗಬಹುದು ಎಂದು ಟಿಮ್ ಕುಕ್ ತಿಳಿಸಿದ್ದಾರೆ. ಅದರ ಪರಿಣಾಮ ಐಫೋನ್ 18 ಸರಣಿಯ ಮೇಲೂ ಬೀಳುವ ಸಾಧ್ಯತೆ ಇದೆ.

ಇದನ್ನೂ ಓದಿ:

ಚಿಪ್ ವೆಚ್ಚದಿಂದ ಒತ್ತಡ

ಹೊಸ ತಲೆಮಾರಿನ ಚಿಪ್‌ಗಳು ಹಾಗೂ ಪ್ರಮುಖ ಎಲೆಕ್ಟ್ರಾನಿಕ್ ಘಟಕಗಳ ಬೆಲೆ ಏರಿಕೆಯಿಂದ ಉತ್ಪಾದನಾ ಖರ್ಚು ಹೆಚ್ಚಾಗಿದೆ. ಇದರಿಂದ ಜಾಗತಿಕ ಮಾರುಕಟ್ಟೆಯಲ್ಲಿ ಐಫೋನ್ ಬೆಲೆ ಏರಿಕೆಯಾಗುವ ಸಾಧ್ಯತೆ ವ್ಯಕ್ತವಾಗಿದೆ.

ಪೂರೈಕೆ ಸರಪಳಿಗೆ ಯುದ್ಧದ ಪರಿಣಾಮ

ಮಧ್ಯಪ್ರಾಚ್ಯ ಉದ್ವಿಗ್ನತೆ ಹಾಗೂ ಕಚ್ಚಾ ವಸ್ತುಗಳ ಕೊರತೆಯಿಂದ ಪೂರೈಕೆ ವ್ಯವಸ್ಥೆಯಲ್ಲಿ ವ್ಯತ್ಯಯ ಉಂಟಾಗಿದೆ. ಕೆಲವು ವಸ್ತುಗಳನ್ನು ಹೆಚ್ಚುವರಿ ವೆಚ್ಚದಲ್ಲಿ ಖರೀದಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದ್ದು, ಇದರ ಪರಿಣಾಮ ಅಂತಿಮ ಉತ್ಪನ್ನದ ಬೆಲೆಯ ಮೇಲೂ ಕಾಣಿಸಿಕೊಳ್ಳಬಹುದು.

ಒಟ್ಟಾರೆ, ಐಫೋನ್ 18 ಸರಣಿ ಹೊಸ ವೈಶಿಷ್ಟ್ಯಗಳ ಜೊತೆಗೆ ದುಬಾರಿ ಬೆಲೆಯೊಂದಿಗೆ ಮಾರುಕಟ್ಟೆ ಪ್ರವೇಶಿಸುವ ಸಾಧ್ಯತೆ ಹೆಚ್ಚಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !