June 19, 2026
Friday, June 19, 2026
spot_img

ಆಡಳಿತ ಸುಧಾರಣೆಗೆ ಮಹತ್ವದ ಹೆಜ್ಜೆ ಇಟ್ಟ ಸರ್ಕಾರ: 14 ಹಿರಿಯ ಐಎಎಸ್ ಅಧಿಕಾರಿಗಳ ದಿಢೀರ್ ವರ್ಗಾವಣೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ರಾಜ್ಯದಲ್ಲಿ ಆಡಳಿತಾತ್ಮಕ ದಕ್ಷತೆ ಮತ್ತು ಇಲಾಖೆಗಳ ಕೆಲಸ ಕಾರ್ಯಗಳಿಗೆ ವೇಗ ನೀಡುವ ಉದ್ದೇಶದಿಂದ ರಾಜ್ಯ ಸರ್ಕಾರವು ಒಟ್ಟು 14 ಹಿರಿಯ ಐಎಎಸ್ (IAS) ಅಧಿಕಾರಿಗಳನ್ನು ದಿಢೀರ್ ವರ್ಗಾವಣೆಗೊಳಿಸಿ ಗುರುವಾರ ಮಹತ್ವದ ಆದೇಶ ಹೊರಡಿಸಿದೆ.

ಪ್ರಮುಖ ಅಧಿಕಾರಿಗಳ ಹೊಸ ಜವಾಬ್ದಾರಿ:

ಈ ಮಹತ್ವದ ವರ್ಗಾವಣೆ ಪಟ್ಟಿಯಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (BDA) ಆಯುಕ್ತ ಮೇಜರ್ ಪಿ. ಮಣಿವಣ್ಣನ್‌ರಿಗೆ ಹೆಚ್ಚುವರಿಯಾಗಿ ‘ನಗರಾಭಿವೃದ್ಧಿ ಮತ್ತು ಭೂ ಸಾರಿಗೆ ನಿರ್ದೇಶನಾಲಯದ’ ಆಯುಕ್ತರ ಹುದ್ದೆಯ ಜವಾಬ್ದಾರಿಯನ್ನು ವಹಿಸಲಾಗಿದೆ. ಇದರೊಂದಿಗೆ ದೀರ್ಘಕಾಲದಿಂದ ಸ್ಥಳ ನಿಯುಕ್ತಿಯ ನಿರೀಕ್ಷೆಯಲ್ಲಿದ್ದ ಡಾ. ಪ್ರಸಾದ್ ಎನ್.ವಿ. ಯನ್ನು ‘ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ’ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.

ಇದನ್ನೂ ಓದಿ:

ದೆಹಲಿ ಕರ್ನಾಟಕ ಭವನದಲ್ಲೂ ಬದಲಾವಣೆ:

ನವದೆಹಲಿಯಲ್ಲಿರುವ ಕರ್ನಾಟಕ ಭವನದ ಆಡಳಿತದಲ್ಲೂ ಪ್ರಮುಖ ಬದಲಾವಣೆಗಳನ್ನು ಮಾಡಲಾಗಿದ್ದು, ಅಲ್ಲಿನ ಪ್ರಾದೇಶಿಕ ಆಯುಕ್ತರಾಗಿದ್ದ ಇಮ್ಕೋಂಗ್ಲಾ ಜಮೀರ್‌ನನ್ನು ಕರ್ನಾಟಕ ಭವನದ ‘ಕಾರ್ಯದರ್ಶಿ’ ಹುದ್ದೆಗೆ ವರ್ಗಾಯಿಸಲಾಗಿದೆ. ಅವರ ಜಾಗಕ್ಕೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಕಾರ್ಯದರ್ಶಿಯಾಗಿದ್ದ ಸಮೀರ್ ಶುಕ್ಲಾರನ್ನು ನವದೆಹಲಿಯ ‘ಕರ್ನಾಟಕ ಭವನದ ನೂತನ ಪ್ರಾದೇಶಿಕ ಆಯುಕ್ತರನ್ನಾಗಿ’ ನಿಯೋಜಿಸಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !