June 20, 2026
Saturday, June 20, 2026
spot_img

ವಿಶ್ವಕಪ್ ತಂಡದಲ್ಲಿ ಹೊಸ ಮುಖಕ್ಕೆ ಅವಕಾಶ: ‘ಟಗರು ಪುಟ್ಟಿ’ ಬದಲಿಗೆ ಟೀಮ್ ಇಂಡಿಯಾ ಸೇರಿಕೊಂಡದ್ದು ಇವರೇ ನೋಡಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಐಸಿಸಿ ಮಹಿಳಾ ಟಿ20 ವಿಶ್ವಕಪ್ 2026ರ ನಡುವೆ ಭಾರತ ಮಹಿಳಾ ತಂಡಕ್ಕೆ ದೊಡ್ಡ ಹಿನ್ನಡೆ ಎದುರಾಗಿದೆ. ತಂಡದ ಪ್ರಮುಖ ಆಲ್‌ರೌಂಡರ್ ಶ್ರೇಯಾಂಕ ಪಾಟೀಲ್ ಗಾಯದ ಕಾರಣದಿಂದ ಟೂರ್ನಿಯಿಂದ ಹೊರಬಿದ್ದಿದ್ದು, ಅವರ ಸ್ಥಾನಕ್ಕೆ ಯುವ ಲೆಗ್ ಸ್ಪಿನ್ನರ್ ಪ್ರೇಮಾ ರಾವತ್ ಅವರನ್ನು ಬಿಸಿಸಿಐ ಆಯ್ಕೆ ಮಾಡಿದೆ.

ಗಾಯದಿಂದ ಹೊರಬಿದ್ದ ಶ್ರೇಯಾಂಕ

ನೆದರ್ಲ್ಯಾಂಡ್ಸ್ ವಿರುದ್ಧದ ಪಂದ್ಯದಲ್ಲಿ ಫೀಲ್ಡಿಂಗ್ ವೇಳೆ ಶ್ರೇಯಾಂಕ ಪಾಟೀಲ್ ಬಲಗಾಲಿಗೆ ಗಾಯ ಮಾಡಿಕೊಂಡಿದ್ದರು. ಚೆಂಡನ್ನು ತಡೆಯುವ ಪ್ರಯತ್ನದ ವೇಳೆ ಕಾಲು ಉಳುಕಿದ್ದು, ತಕ್ಷಣವೇ ಅವರನ್ನು ಸ್ಟ್ರೆಚರ್ ಮೂಲಕ ಮೈದಾನದಿಂದ ಹೊರಗೆ ಕರೆದೊಯ್ಯಲಾಗಿತ್ತು. ವೈದ್ಯಕೀಯ ಪರೀಕ್ಷೆಯ ಬಳಿಕ ಅವರು ಉಳಿದ ಪಂದ್ಯಗಳಿಗೆ ಲಭ್ಯರಾಗುವುದಿಲ್ಲ ಎಂಬುದು ಸ್ಪಷ್ಟವಾಗಿದೆ.

ಪ್ರೇಮಾ ರಾವತ್‌ಗೆ ಮೊದಲ ವಿಶ್ವಕಪ್ ಅವಕಾಶ

ಶ್ರೇಯಾಂಕ ಬದಲಿಗೆ ಯುವ ಲೆಗ್ ಸ್ಪಿನ್ನರ್ ಪ್ರೇಮಾ ರಾವತ್ ಅವರಿಗೆ ಭಾರತ ತಂಡದಲ್ಲಿ ಸ್ಥಾನ ನೀಡಲಾಗಿದೆ. ಮಹಿಳಾ ಪ್ರೀಮಿಯರ್ ಲೀಗ್‌ನಲ್ಲಿ ಆರ್‌ಸಿಬಿ ಪರ ಆಡಿರುವ ಪ್ರೇಮಾ, ದೇಶೀಯ ಕ್ರಿಕೆಟ್‌ನಲ್ಲೂ ಗಮನಾರ್ಹ ಪ್ರದರ್ಶನ ನೀಡಿ ಆಯ್ಕೆದಾರರ ಗಮನ ಸೆಳೆದಿದ್ದರು.

ಇದನ್ನೂ ಓದಿ:

ಐಸಿಸಿ ತಾಂತ್ರಿಕ ಸಮಿತಿಯಿಂದ ಅನುಮೋದನೆ

ಆಟಗಾರ್ತಿಯ ಬದಲಾವಣೆಗೆ ಐಸಿಸಿ ತಾಂತ್ರಿಕ ಸಮಿತಿಯೂ ಒಪ್ಪಿಗೆ ನೀಡಿದೆ. ಪ್ರೇಮಾ ಈಗಾಗಲೇ ಇಂಗ್ಲೆಂಡ್‌ನಲ್ಲಿರುವ ಕಾರಣ, ಶೀಘ್ರದಲ್ಲೇ ಭಾರತೀಯ ತಂಡವನ್ನು ಸೇರಿಕೊಳ್ಳಲಿದ್ದಾರೆ.

ತಂಡಕ್ಕೆ ಪ್ರಮುಖ ಹೊಡೆತ

ಶ್ರೇಯಾಂಕ ಪಾಟೀಲ್ ಬೌಲಿಂಗ್ ಜೊತೆಗೆ ಕೆಳಕ್ರಮಾಂಕದಲ್ಲಿ ಉಪಯುಕ್ತ ಬ್ಯಾಟಿಂಗ್ ಮಾಡುವ ಸಾಮರ್ಥ್ಯ ಹೊಂದಿದ್ದರು. ಹೀಗಾಗಿ ಅವರ ಅನುಪಸ್ಥಿತಿ ನಾಯಕಿ ಹರ್ಮನ್‌ಪ್ರೀತ್ ಕೌರ್ ನೇತೃತ್ವದ ತಂಡಕ್ಕೆ ಸವಾಲಾಗಿ ಪರಿಣಮಿಸಿದೆ.

ಮೊದಲ ಬಾರಿಗೆ ವಿಶ್ವಕಪ್ ತಂಡಕ್ಕೆ ಸೇರ್ಪಡೆಯಾಗಿರುವ ಪ್ರೇಮಾ ರಾವತ್ ಅವರ ಮೇಲೆ ಈಗ ಅಭಿಮಾನಿಗಳ ನಿರೀಕ್ಷೆ ಹೆಚ್ಚಿದೆ. ಅವಕಾಶವನ್ನು ಅವರು ಹೇಗೆ ಬಳಸಿಕೊಳ್ಳುತ್ತಾರೆ ಎಂಬುದರತ್ತ ಎಲ್ಲರ ಚಿತ್ತ ನೆಟ್ಟಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !