Saturday, October 4, 2025

ಧರ್ಮಸ್ಥಳ ಪ್ರಕರಣ: ಎಸ್‌ಐಟಿ ಕಸ್ಟಡಿ ಅಂತ್ಯ, ಈಗ ಶಿವಮೊಗ್ಗ ಜೈಲಿನತ್ತ ಚಿನ್ನಯನ ಹೆಜ್ಜೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಧರ್ಮಸ್ಥಳ ಶವ ಹೂತಿಟ್ಟ ಆರೋಪಕ್ಕೆ ಸಂಬಂಧಿಸಿ ದೂರುದಾರ ಚಿನ್ನಯ್ಯಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.


ಚಿನ್ನಯ್ಯನ ಎಸ್‌ಐಟಿ ಕಸ್ಟಡಿ ಇಂದು ಅಂತ್ಯಗೊಂಡ ಹಿನ್ನಲೆಯಲ್ಲಿ ಆತನನ್ನು ಅಧಿಕಾರಿಗಳು ಬೆಳ್ತಂಗಡಿಯ ಪ್ರಧಾನ ವ್ಯವಹಾರಿಕ ನ್ಯಾಯಾಧೀಶರು ಮತ್ತು ಪ್ರಥಮ ದರ್ಜೆ ನ್ಯಾಯಿಕ ದಂಡಾಧಿಕಾರಿಗಳ ನ್ಯಾಯಾಲಯಕ್ಕೆ ಹಾಜರುಪಡಿಸಿದರು.

ಇದೀಗ ಆತನ ಎಸ್‌ಐಟಿ ವಿಚಾರಣೆ ಬಹುತೇಕ ಪೂರ್ಣಗೊಂಡ ಹಿನ್ನಲೆಯಲ್ಲಿ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದ್ದು, ಭದ್ರತಾ ದೃಷ್ಟಿಯಿಂದ ಶಿವಮೊಗ್ಗ ಜೈಲಿಗೆ ಹಸ್ತಾಂತರಿಸಲಾಗಿದೆ.