June 20, 2026
Saturday, June 20, 2026
spot_img

ವಿಶ್ರಾಂತಿ ಪಡೆಯುತ್ತಿದ್ದ ವೇಳೆ ಹೃದಯಾಘಾತ: ಕೆಎಸ್‌ಆರ್‌ಪಿ ಸಿಬ್ಬಂದಿ ಸಾ*ವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹೃದಯ ಸಂಬಂಧಿ ಸಮಸ್ಯೆಗಳ ಪ್ರಕರಣಗಳು ಹೆಚ್ಚುತ್ತಿರುವ ನಡುವೆಯೇ ಕೊರಟಗೆರೆಯಲ್ಲಿ ಕೆಎಸ್‌ಆರ್‌ಪಿ ಎಎಸ್‌ಐ ಒಬ್ಬರು ಎದೆನೋವಿನಿಂದ ಮೃತಪಟ್ಟಿರುವ ಘಟನೆ ನಡೆದಿದೆ.

ಮೃತರನ್ನು ಎನ್.ಜಿ. ಪವಾರ್ (54) ಎಂದು ಗುರುತಿಸಲಾಗಿದೆ.

ಮಧ್ಯರಾತ್ರಿ ಅಸ್ವಸ್ಥತೆ

ಕೊರಟಗೆರೆಯ ಕೆಎಸ್‌ಆರ್‌ಪಿ ಬೆಟಾಲಿಯನ್ ಸಿಬ್ಬಂದಿ ಬ್ಯಾರಕ್‌ನಲ್ಲಿ ವಿಶ್ರಾಂತಿ ಪಡೆಯುತ್ತಿದ್ದ ವೇಳೆ ರಾತ್ರಿ ಸುಮಾರು 1 ಗಂಟೆ ಸುಮಾರಿಗೆ ಪವಾರ್ ಅವರಿಗೆ ತೀವ್ರ ಎದೆನೋವು ಕಾಣಿಸಿಕೊಂಡಿದೆ. ತಕ್ಷಣ ಸಹೋದ್ಯೋಗಿಗಳು ಅವರನ್ನು ಆಸ್ಪತ್ರೆಗೆ ಕರೆದೊಯ್ಯಲು ಮುಂದಾದರು.

ಆದರೆ ಆಸ್ಪತ್ರೆಗೆ ಸಾಗಿಸುವ ವೇಳೆ ಅವರ ಆರೋಗ್ಯ ಮತ್ತಷ್ಟು ಹದಗೆಟ್ಟಿದ್ದು, ಮಾರ್ಗ ಮಧ್ಯೆಯೇ ಅವರು ಕೊನೆಯುಸಿರೆಳೆದಿದ್ದಾರೆ. ಹೃದಯಾಘಾತದಿಂದ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.

ಇದನ್ನೂ ಓದಿ:

ಕುಟುಂಬಕ್ಕೆ ಮಾಹಿತಿ

ಎನ್.ಜಿ. ಪವಾರ್ ಅವರು ಮೂಲತಃ ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲ್ಲೂಕಿನ ನಿವಾಸಿಯಾಗಿದ್ದರು. ಅವರ ಪತ್ನಿ ಕೂಡ ಪೊಲೀಸ್ ಇಲಾಖೆಯಲ್ಲಿ ಹೆಡ್ ಕಾನ್ಸ್‌ಟೇಬಲ್ ಆಗಿ ಸೇವೆ ಸಲ್ಲಿಸುತ್ತಿದ್ದು, ಬಾಗಲಕೋಟೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಘಟನೆಯ ಕುರಿತು ಕುಟುಂಬ ಸದಸ್ಯರಿಗೆ ಮಾಹಿತಿ ನೀಡಲಾಗಿದ್ದು, ಕೊರಟಗೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ಕ್ರಮ ಕೈಗೊಳ್ಳಲಾಗಿದೆ.

ಪವಾರ್ ಅವರ ಅಕಾಲಿಕ ನಿಧನದಿಂದ ಪೊಲೀಸ್ ಇಲಾಖೆಯ ಸಹೋದ್ಯೋಗಿಗಳು ಮತ್ತು ಕುಟುಂಬಸ್ಥರಲ್ಲಿ ದುಃಖದ ವಾತಾವರಣ ನಿರ್ಮಾಣವಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !