August 26, 2026
Wednesday, August 26, 2026
spot_img

‘ಹಣ ಕೊಡದಿದ್ದರೆ HIV ಇದೆ ಅಂತ ಹೇಳ್ತೀನಿ’: ಪತ್ನಿ ವಿರುದ್ಧ ಪೊಲೀಸ್ ಠಾಣೆಯ ಮೆಟ್ಟಿಲೇರಿದ ಪತಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಹೆಚ್‌ಐವಿ ಸೋಂಕು ಹಾಗೂ ಅಕ್ರಮ ಚಟುವಟಿಕೆಗಳ ಬಗ್ಗೆ ಸುಳ್ಳು ಪ್ರಚಾರ ಮಾಡುವುದಾಗಿ ಬೆದರಿಸಿ ಹಣಕ್ಕೆ ಬೇಡಿಕೆ ಇಟ್ಟಿರುವ ಆರೋಪದಡಿ ವ್ಯಕ್ತಿಯೊಬ್ಬರು ತಮ್ಮ ಪತ್ನಿ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಮಾರತ್ತಹಳ್ಳಿ ಪೊಲೀಸ್ ಠಾಣೆಯಲ್ಲಿ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಮ್ಯಾಟ್ರಿಮೋನಿ ಮೂಲಕ ಪರಿಚಯ, ಬಳಿಕ ವಿವಾಹ

ದೂರುದಾರರಾಗಿರುವ 51 ವರ್ಷದ ಉದ್ಯಮಿ, 2021ರಲ್ಲಿ ಮ್ಯಾಟ್ರಿಮೋನಿ ವೆಬ್‌ಸೈಟ್ ಮೂಲಕ ಮಹಿಳೆಯ ಪರಿಚಯವಾಗಿದ್ದು, 2022ರಲ್ಲಿ ವಿವಾಹವಾಗಿದ್ದರು ಎಂದು ತಿಳಿಸಿದ್ದಾರೆ. ವಿವಾಹದ ಬಳಿಕ ಹಣದ ಬೇಡಿಕೆಗಳು ಹೆಚ್ಚಾಗಿದ್ದು, ಬೇಡಿಕೆ ಈಡೇರಿಸದಿದ್ದರೆ ಮಾನಹಾನಿ ಮಾಡುವುದಾಗಿ ಬೆದರಿಕೆ ಹಾಕಲಾಗಿದೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ:

₹50 ಲಕ್ಷ ಬೇಡಿಕೆ ಆರೋಪ

ಮಹಿಳೆ ₹50 ಲಕ್ಷ ಹಣಕ್ಕೆ ಒತ್ತಾಯಿಸಿದ್ದು, ಹಣ ನೀಡದಿದ್ದರೆ ಹೆಚ್‌ಐವಿ ಸೋಂಕು ಇದೆ ಹಾಗೂ ಅಕ್ರಮ ಚಟುವಟಿಕೆ ನಡೆಸುತ್ತಿದ್ದಾರೆ ಎಂಬ ಸುಳ್ಳು ಸುದ್ದಿಗಳನ್ನು ಹರಡುವುದಾಗಿ ಬೆದರಿಕೆ ಹಾಕಿದ್ದಾಳೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಕಳವು ಮತ್ತು ಬ್ಯಾಂಕ್ ವಂಚನೆ ಆರೋಪ

ಮನೆಯಲ್ಲಿದ್ದ ನಗದು, ಚಿನ್ನಾಭರಣ ಹಾಗೂ ವಿದೇಶಿ ಕರೆನ್ಸಿಯನ್ನು ತೆಗೆದುಕೊಂಡಿರುವುದರ ಜೊತೆಗೆ ಬ್ಯಾಂಕ್ ಖಾತೆಯಿಂದ ಹಣ ಡ್ರಾ ಮಾಡಿರುವ ಆರೋಪವನ್ನೂ ಉದ್ಯಮಿ ಮಾಡಿದ್ದಾರೆ. ಪ್ರಕರಣದ ಸಂಬಂಧ ಪೊಲೀಸರು ತನಿಖೆ ಆರಂಭಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !