June 20, 2026
Saturday, June 20, 2026
spot_img

ಸೋಶಿಯಲ್ ಮೀಡಿಯಾ ವಿವಾದಕ್ಕೆ ತೆರೆ: ಹೈಕೋರ್ಟ್‌ನಿಂದ ಡಿಕೆಶಿಗೆ ಬಿಗ್ ರಿಲೀಫ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸಾಮಾಜಿಕ ಜಾಲತಾಣದಲ್ಲಿ ಬಿಜೆಪಿ ನಾಯಕರ ವಿರುದ್ಧ ಆಕ್ಷೇಪಾರ್ಹ ಪೋಸ್ಟ್‌ಗಳನ್ನು ಹಂಚಿಕೊಂಡ ಆರೋಪದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ದಾಖಲಾಗಿದ್ದ ಎಫ್‌ಐಆರ್ ಅನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ. ಈ ಮೂಲಕ ಸಿಎಂಗೆ ಮಹತ್ವದ ಕಾನೂನು ನೆಮ್ಮದಿ ದೊರೆತಿದೆ.

ಪ್ರಕರಣದ ಹಿನ್ನೆಲೆ

ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವನ್ನು ಪ್ರಶ್ನಿಸಿ ಡಿ.ಕೆ. ಶಿವಕುಮಾರ್ ಹೈಕೋರ್ಟ್ ಮೆಟ್ಟಿಲೇರಿದ್ದರು. ವಿಚಾರಣೆ ವೇಳೆ ಅವರ ಪರ ವಕೀಲರು, ಪೋಸ್ಟ್‌ಗಳನ್ನು ಕಾಂಗ್ರೆಸ್‌ನ ಸಾಮಾಜಿಕ ಜಾಲತಾಣ ವಿಭಾಗದಿಂದ ಪ್ರಕಟಿಸಲಾಗಿದ್ದು, ಕೆಪಿಸಿಸಿ ಅಧ್ಯಕ್ಷರಾಗಿದ್ದ ಕಾರಣಕ್ಕೆ ಮಾತ್ರ ಡಿಕೆ ಶಿವಕುಮಾರ್ ಅವರನ್ನು ಪ್ರಕರಣದಲ್ಲಿ ಸೇರಿಸಲಾಗಿದೆ ಎಂದು ವಾದ ಮಂಡಿಸಿದರು.

ಇದನ್ನೂ ಓದಿ:

ಬಿಜೆಪಿ ನೀಡಿದ್ದ ದೂರು

ಶ್ರೀಕಾಂತ್ ಪೂಜಾರಿ ಬಂಧನದ ಸಂದರ್ಭದಲ್ಲಿ ಬಿಜೆಪಿ ನಡೆಸಿದ್ದ ಪ್ರತಿಭಟನೆಗೆ ಪ್ರತಿಕ್ರಿಯೆಯಾಗಿ ಕಾಂಗ್ರೆಸ್ ಅಧಿಕೃತ ಫೇಸ್‌ಬುಕ್ ಪುಟದಲ್ಲಿ ಕೆಲವು ವ್ಯಂಗ್ಯಚಿತ್ರಗಳನ್ನು ಪ್ರಕಟಿಸಲಾಗಿತ್ತು. ಈ ಪೋಸ್ಟ್‌ಗಳು ಮಾನಹಾನಿಕಾರಕವಾಗಿವೆ ಎಂದು ಆರೋಪಿಸಿ ಬಿಜೆಪಿ ಕಾನೂನು ಘಟಕದ ಸಂಚಾಲಕ ಯೋಗೇಂದ್ರ ಹೊಡಘಟ್ಟ ಖಾಸಗಿ ದೂರು ಸಲ್ಲಿಸಿದ್ದರು.

ಹೈಕೋರ್ಟ್ ತೀರ್ಪು

ಎರಡೂ ಪಕ್ಷಗಳ ವಾದ ಆಲಿಸಿದ ನ್ಯಾಯಮೂರ್ತಿ ನಾಗಪ್ರಸನ್ನ ಅವರ ಪೀಠ, ಪ್ರಕರಣ ಮುಂದುವರಿಸುವ ಅಗತ್ಯವಿಲ್ಲ ಎಂದು ಅಭಿಪ್ರಾಯಪಟ್ಟಿದ್ದು, ಡಿಕೆ ಶಿವಕುಮಾರ್ ವಿರುದ್ಧ ದಾಖಲಾಗಿದ್ದ ಎಫ್‌ಐಆರ್ ಅನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !