June 21, 2026
Sunday, June 21, 2026
spot_img

ಅಡ್ಡ ಮತದಾನ ಮಾಡಿದವರಿಗೆ ಪಶ್ಚಾತ್ತಾಪ ಕಾದಿದೆ: ಪ್ರಹ್ಲಾದ ಜೋಶಿ ಖಡಕ್ ಎಚ್ಚರಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ವಿಧಾನ ಪರಿಷತ್ ಚುನಾವಣೆಯಲ್ಲಿ ನಡೆದ ಅಡ್ಡ ಮತದಾನವು ಅತ್ಯಂತ ದುರದೃಷ್ಟಕರ ಎಂದು ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದುಡ್ಡಿನ ಆಮಿಷಕ್ಕೆ ಒಳಗಾಗಿ ಈ ರೀತಿ ಮಾಡಿದವರು ಮುಂದಿನ ದಿನಗಳಲ್ಲಿ ಪಶ್ಚಾತ್ತಾಪ ಅನುಭವಿಸಲಿದ್ದಾರೆ. ಈ ಬಗ್ಗೆ ಹೈಕಮಾಂಡ್ ಕಠಿಣ ಕ್ರಮ ಕೈಗೊಳ್ಳಲಿದ್ದು, ಈಗಾಗಲೇ ರಾಜ್ಯಾಧ್ಯಕ್ಷರು ಸಮಿತಿ ರಚಿಸಿ ತನಿಖೆ ನಡೆಸುತ್ತಿದ್ದಾರೆ ಎಂದು ಅವರು ತಿಳಿಸಿದರು.

ಇತರ ಪಕ್ಷಗಳ ನಾಯಕರು ಬಿಜೆಪಿ ಸೇರ್ಪಡೆ

ಪಶ್ಚಿಮ ಬಂಗಾಳದ ಟಿಎಂಸಿ ಹಾಗೂ ಮಹಾರಾಷ್ಟ್ರದ ಶಿವಸೇನೆಯಲ್ಲಿ ಕುಟುಂಬ ರಾಜಕಾರಣ ಮಿತಿ ಮೀರಿದೆ. ಅಲ್ಲಿ ಭ್ರಷ್ಟಾಚಾರ, ಮಹಿಳೆಯರ ಮೇಲಿನ ದೌರ್ಜನ್ಯ ಹೆಚ್ಚಾಗಿದ್ದು, ಭವಿಷ್ಯವಿಲ್ಲದ ಕಾರಣ ಅಲ್ಲಿನ ಶಾಸಕರು ಮತ್ತು ಸಂಸದರು ಬಿಜೆಪಿಯತ್ತ ಮುಖ ಮಾಡುತ್ತಿದ್ದಾರೆ ಎಂದು ಜೋಶಿ ವಿಶ್ಲೇಷಿಸಿದರು.

ಆರ್‌ಎಸ್‌ಎಸ್‌ ಮತ್ತು ಪ್ರಿಯಾಂಕ್ ಖರ್ಗೆ ಟೀಕೆ

ನೂರು ವರ್ಷ ಪೂರೈಸಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಯಾವುದೇ ನೋಂದಣಿಯ ಅಗತ್ಯವಿಲ್ಲ. ಸಚಿವ ಪ್ರಿಯಾಂಕ್ ಖರ್ಗೆ ಅವರ ಹೇಳಿಕೆಗಳು ಹಳೆಯ ರೇಡಿಯೋದಂತೆ ಪುನರಾವರ್ತನೆಯಾಗುತ್ತಿದ್ದು, ಅದಕ್ಕೆ ಪ್ರತಿಕ್ರಿಯಿಸುವುದು ಅಪ್ರಸ್ತುತ ಎಂದರು.

ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ

ಡಿ.ಕೆ. ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ ಜೋಶಿ, ಬೆಂಗಳೂರನ್ನು ಅಧೋಗತಿಗೆ ತಳ್ಳಿದವರು ಈಗ ಮುಖ್ಯಮಂತ್ರಿಯಾಗಿದ್ದಾರೆ. ಪ್ರಸ್ತುತ ರಾಜ್ಯ ಸರ್ಕಾರ ಸಂಪೂರ್ಣ ಭ್ರಷ್ಟಾಚಾರದಲ್ಲಿ ಮುಳುಗಿದ್ದು, ಸ್ವತಃ ಕಾಂಗ್ರೆಸ್ ಶಾಸಕರೇ ಇದರ ವಿರುದ್ಧ ಧ್ವನಿ ಎತ್ತುತ್ತಿದ್ದಾರೆ ಎಂದು ಲೇವಡಿ ಮಾಡಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !