ಹೊಸದಿಗಂತ ವರದಿ ಭಟ್ಕಳ :
ಗೋ ಸಾಗಾಟ ಸೇರಿದಂತೆ ವಿವಿಧ ಪ್ರಕರಣದಲ್ಲಿ ಆರೋಪಿಯಾಗಿರುವ ಮತ್ತು ತನ್ನ ಅಪರಾಧ ಚಟುವಟಿಕೆ ಮೂಲಕ ಶಾಂತಿ ಭಂಗ ಉಂಟು ಮಾಡಬಹುದು ಎನ್ನುವ ಕಾರಣಕ್ಕೆ ಇಲ್ಲಿನ ನಗರ ಠಾಣೆ ವ್ಯಾಪ್ತಿಯ ಸಿದ್ದೀಕ್ ಸ್ಟ್ರೀಟ್ ನಿವಾಸಿ ಇಸ್ಮಾಯಿಲ್ ಹವ್ವಾ ( ೪೬) ಎಂಬಾತನನ್ನು ಜಿಲ್ಲಾ ಪೊಲೀಸ್ ವರಿಷ್ಠಾಕಾರಿಯವರು ರಾಯಚೂರು ಜಿಲ್ಲೆಗೆ ಗಡಿಪಾರು ಮಾಡಿ ಆದೇಶ ಮಾಡಿದ್ದಾರೆ.
ಈತನ ಮೇಲೆ ಒಟ್ಟೂ 7 ಪ್ರಕರಣಗಳು ದಾಖಲಾಗಿದ್ದು, ಅದರಲ್ಲಿ 2 ಪ್ರಕರಣದಲ್ಲಿ ಶಿಕ್ಷೆಯಾಗಿದ್ದು, ಉಳಿದ 5 ಪ್ರಕರಣಗಳು ವಿಚಾರಣೆಯಲ್ಲಿದೆ. ಈತ ತನ್ನ ಅಪರಾಧ ಹಿನ್ನೆಲೆಯನ್ನು ಬಂಡವಾಳವಾಗಿಸಿಕೊಂಡು ಭಟ್ಕಳ ತಾಲ್ಲೂಕಿನಲ್ಲಿ ತನ್ನ ಅಪರಾಧ ಚಟುವಟಿಕೆಗಳ ಮೂಲಕ ಸಾರ್ವಜನಿಕ ಸುರಕ್ಷತೆಗೆ ಅಪಾಯವನ್ನು ತಂದು ಸಾರ್ವಜನಿಕ ಶಾಂತಿ, ನೆಮ್ಮದಿ, ಸೌಹಾರ್ದತೆಗೆ ಮತ್ತು ಆಸ್ತಿ ಪಾಸ್ತಿ , ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟು ಮಾಡಿ ವ್ಯತಿರಿಕ್ತ ಪರಿಣಾಮ ಬೀರಬಲ್ಲ ಸಾಧ್ಯತೆ ಇರುವುದರಿಂದ ಈತನನ್ನು 6 ತಿಂಗಳುಗಳ ಕಾಲ ರಾಯಚೂರು ಜಿಲ್ಲೆಗೆ ಗಡಿಪಾರು ಮಾಡಿ ಆದೇಶ ಮಾಡಲಾಗಿದೆ.



