October 16, 2026
Friday, October 16, 2026
spot_img

ಬೆಳಗಾವಿಯಲ್ಲಿ ನಾಳೆ ಜಗನ್ನಾಥರಾವ್ ಜೋಶಿ ಸ್ಮಾರಕ ಭವನದ ಭವ್ಯ ಲೋಕಾರ್ಪಣೆ

ಹೊಸದಿಗಂತ ವರದಿ ಬೆಳಗಾವಿ:

ನಗರದ ಸಂಘ ಸದನ ನ್ಯೂ ಗೂಡ್ಸ್ ಶೆಡ್ ರಸ್ತೆಯಲ್ಲಿ ನಿರ್ಮಾಣಗೊಂಡಿರುವ ಭವ್ಯ ಶ್ರೀ ಜಗನ್ನಾಥರಾವ್ ಜೋಶಿ ಸ್ಮಾರಕ ಭವನ ನಾಳೆ ಅದ್ದೂರಿಯಾಗಿ ಲೋಕಾರ್ಪಣೆಗೊಳ್ಳಲಿದೆ.

ಕಾರ್ಯಕ್ರಮಕ್ಕೆ ಪ.ಪೂ. ಶ್ರೀ ಮ.ನಿ.ಪ್ರ. ಗುರುಸಿದ್ದ ಮಹಾಸ್ವಾಮಿಗಳು, ಕಾರಂಜಿಮಠದ ಮಹಾಸ್ವಾಮಿಗಳು ದಿವ್ಯ ಸಾನ್ನಿಧ್ಯ ವಹಿಸಲಿದ್ದು, ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಅವರ ನೇತೃತ್ವದಲ್ಲಿ ಸ್ಮಾರಕ ಭವನವನ್ನು ಲೋಕಾರ್ಪಣೆ ಗೊಳಿಸಲಿದ್ದಾರೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಾಂತ ಸಂಘಚಾಲಕರಾದ ಬಸವರಾಜ ಡಂಬಳ ವಹಿಸಲಿದ್ದು, ಜನ ಕಲ್ಯಾಣ ಟ್ರಸ್ಟ್ ನಿರ್ವಾಹಕ ವಿಶ್ವಸ್ಥ ಅರವಿಂದ್ರಾವ್ ದೇಶಪಾಂಡೆ ಅವರು ಸರ್ವಜನತೆಗೆ ಆತ್ಮೀಯ ಸ್ವಾಗತ ಕೋರಿದ್ದಾರೆ.

ಇದನ್ನೂ ಓದಿ:

ಲೋಕಾರ್ಪಣೆ ಸಮಾರಂಭದ ಹಿನ್ನೆಲೆಯಲ್ಲಿ ಸ್ಮಾರಕ ಭವನವನ್ನು ಮದುವಣಗಿತ್ತಿಯಂತೆ ಅಲಂಕರಿಸಲಾಗಿದ್ದು, ಇಡೀ ಪ್ರದೇಶ ಹಬ್ಬದ ವಾತಾವರಣವನ್ನು ಪಡೆದುಕೊಂಡಿದೆ. ಸಂಘ ಪರಿವಾರದ ಪದಾಧಿಕಾರಿಗಳು, ಬಿಜೆಪಿ ಮುಖಂಡರು, ಕಾರ್ಯಕರ್ತರು ಸೇರಿದಂತೆ ಸಾವಿರಾರು ಸಂಖ್ಯೆಯಲ್ಲಿ ಜನರು ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ನಗರದ ಪ್ರಮುಖ ಕಾರ್ಯಕ್ರಮವಾಗಿ ಗಮನ ಸೆಳೆದಿರುವ ಈ ಲೋಕಾರ್ಪಣೆ ಸಮಾರಂಭಕ್ಕೆ ಅಗತ್ಯ ಸಿದ್ಧತೆಗಳನ್ನು ಪೂರ್ಣಗೊಳಿಸಲಾಗಿದೆ.

Must Read