ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ದೀರ್ಘ ಬಿಡುವಿನ ಬಳಿಕ ಮುಂಗಾರು ಮಾರುತಗಳು ಮತ್ತೆ ಚುರುಕುಗೊಂಡಿವೆ. ಮುಂದಿನ 3 ರಿಂದ 4 ದಿನಗಳ ಕಾಲ ಕರ್ನಾಟಕದ ಕರಾವಳಿ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ವರುಣನ ಆರ್ಭಟ ಜೋರಾಗಲಿದ್ದು, ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆಯಾಗಿ ‘ಯೆಲ್ಲೋ ಅಲರ್ಟ್’ ಘೋಷಿಸಿದೆ.
ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ
ಮುಂಗಾರು ಮಾರುತಗಳ ತೀವ್ರತೆ ಹೆಚ್ಚಾಗಿರುವುದರಿಂದ ಕರಾವಳಿಯ ಮೂರು ಪ್ರಮುಖ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಸಮುದ್ರ ತೀರದಲ್ಲಿ ಗಾಳಿಯ ವೇಗ ಗಂಟೆಗೆ 40 ರಿಂದ 50 ಕಿ.ಮೀ ಇರಲಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.
ಇದನ್ನೂ ಓದಿ:
ಉತ್ತರ ಒಳನಾಡಿನಲ್ಲಿ ಸಿಡಿಲು ಸಹಿತ ಮಳೆ
ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ ಮತ್ತು ಕೊಪ್ಪಳದಲ್ಲಿ ಬಿರುಗಾಳಿ ಹಾಗೂ ಸಿಡಿಲು ಸಹಿತ ಚದುರಿದ ಮಳೆಯಾಗಲಿದೆ. ಜೂನ್ 22 ಮತ್ತು 23 ರಂದು ಈ ಭಾಗದಲ್ಲಿ ಮಳೆಯ ತೀವ್ರತೆ ಹೆಚ್ಚಿರಲಿದೆ ಎಂದು ಐಎಂಡಿ ತಿಳಿಸಿದೆ.



