June 21, 2026
Sunday, June 21, 2026
spot_img

ರಾಷ್ಟ್ರ ರಾಜಕಾರಣದಲ್ಲಿ ತೀವ್ರ ಕುತೂಹಲ: ‌ಮಾಹರಾಷ್ಟ್ರ ಮಾಜಿ ಸಿಎಂ ಉದ್ಧವ್ ಠಾಕ್ರೆ ನಿವಾಸಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ದಿಢೀರ್ ಭೇಟಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಹಾರಾಷ್ಟ್ರ ರಾಜಕಾರಣದ ಪ್ರಭಾವಿ ಕೇಂದ್ರವಾದ ‘ಮಾತೋಶ್ರೀ’ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಶಿವಸೇನಾ ಪಕ್ಷದ ಮುಖ್ಯಸ್ಥ ಹಾಗೂ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆಯೊಂದಿಗೆ ಡಿ.ಕೆ ಶಿವಕುಮಾರ್ ನಡೆಸಿದ ಈ ದಿಢೀರ್ ಭೇಟಿ ರಾಷ್ಟ್ರ ರಾಜಕಾರಣದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

INDIA ಒಕ್ಕೂಟ ಬಲಪಡಿಸುವ ಕುರಿತು ಚರ್ಚೆ?

ಮೂಲಗಳ ಪ್ರಕಾರ, ಉಭಯ ನಾಯಕರ ನಡುವೆ ಸುಮಾರು ಮುಕ್ಕಾಲು ಗಂಟೆಗೂ ಹೆಚ್ಚು ಕಾಲ ಸುದೀರ್ಘ ಆಪ್ತ ಸಮಾಲೋಚನೆ ನಡೆದಿದೆ. ಮುಂಬರುವ ಪ್ರಮುಖ ಚುನಾವಣೆಗಳು, ರಾಷ್ಟ್ರ ಮಟ್ಟದಲ್ಲಿ ‘ಇಂಡಿ’ (INDIA) ಒಕ್ಕೂಟದ ಕಾರ್ಯತಂತ್ರಗಳು ಮತ್ತು ಬಿಜೆಪಿ ವಿರೋಧಿ ಅಲೆಗೆ ಹೊಸ ರೂಪ ನೀಡುವ ಕುರಿತು ಈ ಸಭೆಯಲ್ಲಿ ಗಂಭೀರ ಚರ್ಚೆ ನಡೆದಿದೆ ಎನ್ನಲಾಗಿದೆ. ಮಹಾರಾಷ್ಟ್ರ ಮತ್ತು ಕರ್ನಾಟಕದ ನಡುವಿನ ರಾಜಕೀಯ ಸಹಕಾರದ ಬಗ್ಗೆಯೂ ನಾಯಕರು ಚರ್ಚಿಸಿದ್ದಾರೆ.

ಇದನ್ನೂ ಓದಿ:

ಆತ್ಮೀಯ ಸ್ವಾಗತ ಕೋರಿದ ಠಾಕ್ರೆ ಕುಟುಂಬ

ಮಾತೋಶ್ರೀ ನಿವಾಸಕ್ಕೆ ಆಗಮಿಸಿದ ಡಿ.ಕೆ. ಶಿವಕುಮಾರ್‌ಗೆ ಉದ್ಧವ್ ಠಾಕ್ರೆ ಹಾಗೂ ಅವರ ಪುತ್ರ ಆದಿತ್ಯ ಠಾಕ್ರೆ ಶಾಲು ಹೊದಿಸಿ ಆತ್ಮೀಯವಾಗಿ ಬರಮಾಡಿಕೊಂಡರು. ಭೇಟಿಯ ನಂತರ ಸಾಮಾಜಿಕ ಜಾಲತಾಣಗಳಲ್ಲಿ ಫೋಟೋ ಹಂಚಿಕೊಂಡಿರುವ ಡಿ.ಕೆ. ಶಿವಕುಮಾರ್, “ದೇಶದ ಪ್ರಜಾಪ್ರಭುತ್ವ ಮತ್ತು ಒಕ್ಕೂಟ ವ್ಯವಸ್ಥೆಯನ್ನು ರಕ್ಷಿಸುವ ನಿಟ್ಟಿನಲ್ಲಿ ಪ್ರಾದೇಶಿಕ ಶಕ್ತಿಗಳ ಒಗ್ಗಟ್ಟು ಪ್ರಮುಖವಾಗಿದೆ” ಎಂದು ಬರೆದುಕೊಂಡಿದ್ದಾರೆ.

ಈ ಭೇಟಿಯು ಮುಂಬರುವ ದಿನಗಳಲ್ಲಿ ಮಹಾರಾಷ್ಟ್ರ ಹಾಗೂ ಕರ್ನಾಟಕ ರಾಜಕೀಯ ಸಮೀಕರಣಗಳಲ್ಲಿ ಯಾವುದೇ ಮಹತ್ವದ ಬದಲಾವಣೆಗೆ ನಾಂದಿ ಹಾಡಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !