June 21, 2026
Sunday, June 21, 2026
spot_img

ಕ್ರಾಸ್‌ ವೋಟಿಂಗ್ ರಹಸ್ಯ ಭೇದಿಸೋಕೆ ಆಣೆ ಪ್ರಮಾಣದ ದಾರಿ?: ಮಂಜುನಾಥನ ಮೊರೆ ಹೋದ ಕಮಲ ಪಾಳಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ವಿಧಾನಪರಿಷತ್ ಚುನಾವಣೆ ಬಳಿಕ ರಾಜ್ಯ ಬಿಜೆಪಿಯಲ್ಲಿ ಅಡ್ಡ ಮತದಾನದ ವಿಚಾರ ಭಾರೀ ಚರ್ಚೆಗೆ ಗ್ರಾಸವಾಗಿದೆ. ಈ ಬೆಳವಣಿಗೆಯನ್ನು ಗಂಭೀರವಾಗಿ ಪರಿಗಣಿಸಿರುವ ಪಕ್ಷದ ನಾಯಕರು, ಕ್ರಾಸ್‌ ವೋಟಿಂಗ್ ಮಾಡಿದವರು ಯಾರು ಎಂಬುದನ್ನು ಪತ್ತೆಹಚ್ಚಲು ಕಸರತ್ತು ಆರಂಭಿಸಿದ್ದಾರೆ.

ಮೂಲಗಳ ಪ್ರಕಾರ, ಧರ್ಮಸ್ಥಳದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಸುವ ಕುರಿತು ಚರ್ಚೆ ನಡೆದಿದ್ದು, ಸಭೆಯಲ್ಲಿ ಭಾಗವಹಿಸುವ ಶಾಸಕರಿಂದ ಮಂಜುನಾಥ ಸ್ವಾಮಿಯ ಸನ್ನಿಧಿಯಲ್ಲಿ ಅಡ್ಡ ಮತದಾನ ಮಾಡಿಲ್ಲ ಎಂಬ ಆಣೆ-ಪ್ರಮಾಣ ಮಾಡಿಸುವ ಪ್ರಸ್ತಾವನೆಯೂ ಕೇಳಿಬಂದಿದೆ.

ಇದನ್ನೂ ಓದಿ:

ಕೆಲವು ಶಾಸಕರ ಮೇಲೆ ಅನುಮಾನ ವ್ಯಕ್ತವಾಗಿದ್ದರೂ, ಅವರು ಯಾವುದೇ ಅಡ್ಡ ಮತದಾನ ಮಾಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದೇ ಕಾರಣಕ್ಕೆ ಸತ್ಯಾಸತ್ಯತೆ ತಿಳಿಯಲು ಧರ್ಮಸ್ಥಳದಲ್ಲಿ ವಿಶೇಷ ಸಭೆ ನಡೆಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಇದೀಗ ಈ ಬೆಳವಣಿಗೆ ರಾಜ್ಯ ರಾಜಕೀಯ ವಲಯದಲ್ಲಿ ಕುತೂಹಲಕ್ಕೆ ಕಾರಣವಾಗಿದ್ದು, ಬಿಜೆಪಿ ಹೈಕಮಾಂಡ್‌ಗೆ ಸಲ್ಲಿಸಬೇಕಾದ ವರದಿಗೂ ಇದು ಮಹತ್ವ ಪಡೆದುಕೊಂಡಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !