ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕೆಲವು ದಿನ ರಾಜ್ಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಕರಾವಳಿ, ಉತ್ತರ ಒಳನಾಡು, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆ ಬೀಳಲಿದ್ದು, ಇಲ್ಲಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಉಡುಪಿ, ದಕ್ಷಿಣ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ, ಕೊಪ್ಪಳ, ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಶಿವಮೊಗ್ಗ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಮಳೆಯ ಸಮಯದಲ್ಲಿ ಗುಡುಗು ಮತ್ತು ಬಿರುಗಾಳಿಯ ತೀವ್ರತೆ ಹೆಚ್ಚಿರಲಿದ್ದು, ಸಾರ್ವಜನಿಕರು ಹಾಗೂ ರೈತರು ಸುರಕ್ಷಿತ ಸ್ಥಳಗಳಲ್ಲೇ ಆಶ್ರಯ ಪಡೆಯಲು ಹವಾಮಾನ ಇಲಾಖೆ ಸೂಚಿಸಿದೆ.
ಮಲೆನಾಡು ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮೋಡಕವಿದ ವಾತಾವರಣದೊಂದಿಗೆ ಮಳೆ ಮುಂದುವರಿಯಲಿದೆ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಬಳ್ಳಾರಿ, ವಿಜಯನಗರ ಮತ್ತು ಚಿತ್ರದುರ್ಗ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಭಾರಿ ಮಳೆಯಾಗಲಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಮತ್ತು ತುಮಕೂರು ಜಿಲ್ಲೆಗಳಲ್ಲಿ ತಂಪಾದ ಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.



