August 31, 2026
Monday, August 31, 2026
spot_img

ಮದುವೆಗೆ ಹೋಗಿ ಮನೆಗೆ ವಾಪಾಸಾದವರಿಗೆ ಶಾಕ್‌, 20 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಕಳ್ಳತನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಮನೆಮಂದಿಯೆಲ್ಲಾ ಮದುವೆಗೆ ಹೋಗಿದ್ದ ವೇಳೆ ಮನೆಗೆ ಕಳ್ಳರು ಎಂಟ್ರಿ ನೀಡಿ 20 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ, ಲಕ್ಷಾಂತರ ಮೌಲ್ಯದ ಬೆಳ್ಳಿ ಆಭರಣಗಳು, 1.50 ಲಕ್ಷ ನಗದು ದೋಚಿ ಪರಾರಿಯಾಗಿರುವ ಘಟನೆ ಬೀದರ್‌ನ ಚಿದ್ರಿ ಗ್ರಾಮದಲ್ಲಿ ನಡೆದಿದೆ.

150 ಗ್ರಾಂ ಚಿನ್ನದ ಆಭರಣಗಳು, 100 ಗ್ರಾಂ ಬೆಳ್ಳಿ ಆಭರಣಗಳು ಮತ್ತು 1.50 ಲಕ್ಷ ನಗದು ದೋಚಿ ಖದೀಮರು ಪರಾರಿಯಾಗಿದ್ದಾರೆ. ಸಂಬಂಧಿಕರ ಮದುವೆಗೆಂದು ರಾಜಕುಮಾರ್‌ ಬಿರಾದರ್‌ ಚಿದ್ರಿ ಫ್ಯಾಮಿಲಿ ಹೋಗಿತ್ತು. ಈ ವೇಳೆ ಕಳ್ಳರು ಮನೆಯ ಬೀಗ ಮುರಿದು ಒಳಕ್ಕೆ ನುಗ್ಗಿದ್ದಾರೆ. ನಂತರ ಮನೆಯನ್ನು ಜಾಲಾಡಿದ್ದಾರೆ. ಕಬೋರ್ಡ್‌ ಹಾಗೂ ಅಲ್ಮಾರಿಯ ಬೀಗ ಮುರಿದು ಕದ್ದು ಪರಾರಿಯಾಗಿದ್ದಾರೆ.

ಸ್ಥಳಕ್ಕೆ ಶ್ವಾನ ದಳ, ಬೆರಳಚ್ಚು ತಜ್ಞರ ತಂಡ ಭೇಟಿ ನೀಡಿ ಪರಿಶೀಲನೆ ಮಾಡಿದೆ. ಘಟನಾ ಸ್ಥಳಕ್ಕೆ ಎಸ್ಪಿ ಪ್ರದೀಪ್ ಗುಂಟಿ, ಗಾಂಧಿಗಂಜ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಈ ಕುರಿತು ಗಾಂಧಿಗಂಜ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !