August 13, 2026
Thursday, August 13, 2026
spot_img

ಇಂದಿನಿಂದ ಭಾರತದಲ್ಲಿ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು, ಆದರೆ ಮೆಸೇಜ್ ಎಡಿಟಿಂಗ್‌ಗೆ ನಿರ್ಬಂಧ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ನೀಟ್‌ ಯುಜಿ ಮರುಪರೀಕ್ಷೆ ಹಿನ್ನೆಲೆಯಲ್ಲಿ ಭಾರತದಲ್ಲಿ ಟೆಲಿಗ್ರಾಮ್‌ ಮೇಲೆ ನಿಷೇಧ ಹೇರಲಾಗಿದ್ದು, ನಿನ್ನೆ ಪರೀಕ್ಷೆ ಮುಗಿದ ಹಿನ್ನೆಲೆಯಲ್ಲಿ ಇಂದಿನಿಂದ ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವು ನಿಷೇಧವನ್ನು ಹಿಂಪಡೆದಿದೆ.

ಪ್ರಸ್ತುತ ಗೂಗಲ್ ಪ್ಲೇ ಸ್ಟೋರ್ ಮತ್ತು ಆಪಲ್ ಆ್ಯಪ್ ಸ್ಟೋರ್‌ಗಳಲ್ಲಿ ಆ್ಯಪ್ ಇನ್ನು ಲಭ್ಯವಾಗಿಲ್ಲದಿದ್ದರೂ, ಇಂಟರ್ನೆಟ್ ಸೇವಾ ಪೂರೈಕೆದಾರರು ಹಂತಹಂತವಾಗಿ ನಿಷೇಧವನ್ನು ರದ್ದುಗೊಳಿಸುತ್ತಿರುವುದರಿಂದ ಶೀಘ್ರದಲ್ಲೇ ಇದು ದೇಶದ ಬಳಕೆದಾರರಿಗೆ ಪೂರ್ಣ ಪ್ರಮಾಣದಲ್ಲಿ ಸಿಗಲಿದೆ.

ನೀಟ್‌ ಪರೀಕ್ಷೆಯ ಪೇಪರ್‌ ಟೆಲಿಗ್ರಾಮ್‌ ಚಾನೆಲ್‌ಗಳಲ್ಲಿ ಸೋರಿಕೆಯಾಗಿತ್ತು. ಈ ರೀತಿ ಆಗಬಾರದು, ಎಲ್ಲರೂ ಸಮಾನವಾಗಿ ಪರೀಕ್ಷೆ ಎದುರಿಸಲಿ ಎನ್ನುವ ಕಾರಣಕ್ಕೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ ಶಿಫಾರಸಿನ ಮೇಲೆಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 69A ಅಡಿಯಲ್ಲಿ ಸರ್ಕಾರ ಟೆಲಿಗ್ರಾಮ್ ಅನ್ನು ತಾತ್ಕಾಲಿಕವಾಗಿ ನಿಷೇಧಿಸಿತ್ತು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !