ಹೊಸದಿಗಂತ ವರದಿ ಕಲಬುರಗಿ:
ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಮನೆಯಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾಗಿರುವ ಘಟನೆ ಜಿಲ್ಲೆಯ ಸೇಡಂ ತಾಲೂಕಿನ ಮಳಖೇಡ ತಾಂಡಾದಲ್ಲಿ ಭಾನುವಾರ ಬೆಳಿಗ್ಗೆ ಸಂಭವಿಸಿದೆ.
ಜಿಲ್ಲೆಯ ಸೇಡಂ ತಾಲೂಕಿನ ಮಳಖೇಡ ತಾಂಡಾದ ಶಿವಕುಮಾರ್ ಸ್ಥಾವರಮಠ್ ಎಂಬುವವರಿಗೆ ಸೇರಿದ ಮನೆಯಲ್ಲಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿದ್ದು, 75 ಸಾವಿರ ನಗದು ಹಣ, ಮೊಬೈಲ್, ಟಿವಿ, ಬಟ್ಟೆ ಬರೆ ಬೆಂಕಿಗಾಹುತಿಯಾಗಿದ್ದು, ಸುಮಾರು 2 ಲಕ್ಷಕ್ಕೂ ಅಧಿಕ ಮೌಲ್ಯದ ವಸ್ತುಗಳು ನಷ್ಟವಾಗಿವೆ.
ಜಿಲ್ಲೆಯ ಸೇಡಂ ತಾಲೂಕಿನ ಮಳಖೇಡ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.