August 13, 2026
Thursday, August 13, 2026
spot_img

ಕೋಚಿಂಗ್ ಸೆಂಟರ್ ಬೆಂಕಿ ದುರಂತ: ಪ್ರಧಾನಿ ಮೋದಿ ಸಂತಾಪ, ಮೃತರ ಕುಟುಂಬಗಳಿಗೆ ಪರಿಹಾರ ಘೋಷಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಉತ್ತರ ಪ್ರದೇಶದ ಲಕ್ನೋದಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡ ದೇಶವನ್ನೇ ಬೆಚ್ಚಿಬೀಳಿಸಿದೆ. ಕೋಚಿಂಗ್ ಸೆಂಟರ್ ಕಾರ್ಯನಿರ್ವಹಿಸುತ್ತಿದ್ದ ಕಟ್ಟಡದಲ್ಲಿ ಕಾಣಿಸಿಕೊಂಡ ಬೆಂಕಿಯಿಂದ ಸಾವನ್ನಪ್ಪಿದವರ ಸಂಖ್ಯೆ 14 ಕಕ್ಕೆ ಏರಿದ್ದು, ಹಲವರು ಗಾಯಗೊಂಡಿದ್ದಾರೆ.

ಪ್ರಧಾನಿ ಮೋದಿ ಸಂತಾಪ

ಘಟನೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಗಳ ನೋವಿನಲ್ಲಿ ತಾವು ಭಾಗಿಯಾಗಿದ್ದೇವೆ ಎಂದು ಹೇಳಿರುವ ಅವರು, ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸಿದ್ದಾರೆ.

ಇದನ್ನೂ ಓದಿ:

ಪರಿಹಾರ ಘೋಷಣೆ

ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂಪಾಯಿ ಹಾಗೂ ಗಾಯಾಳುಗಳಿಗೆ ತಲಾ 50 ಸಾವಿರ ರೂಪಾಯಿ ನೆರವು ಘೋಷಿಸಲಾಗಿದೆ.

ಯೋಗಿ ಆದಿತ್ಯನಾಥ್ ಸೂಚನೆ

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೂಡ ಘಟನೆಗೆ ಸಂತಾಪ ಸೂಚಿಸಿದ್ದು, ಗಾಯಾಳುಗಳಿಗೆ ಉಚಿತ ಮತ್ತು ಗುಣಮಟ್ಟದ ಚಿಕಿತ್ಸೆ ಒದಗಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !