ಹೊಸದಿಗಂತ ಡಿಜಿಟಲ್ ಡೆಸ್ಕ್:
ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು ಸೋಮವಾರ 52ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕದ ಅವರ ಮೊದಲ ಜನ್ಮದಿನವಾಗಿರುವುದರಿಂದ ರಾಜ್ಯದಾದ್ಯಂತ ಸಂಭ್ರಮ ಮನೆ ಮಾಡಿದೆ.
ಪ್ರಮುಖ ನಾಯಕರ ಶುಭಾಶಯ
ಪ್ರಧಾನಿ ನರೇಂದ್ರ ಮೋದಿ, ಮಾಜಿ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, ಎಐಎಡಿಎಂಕೆ ನಾಯಕ ಎಡಪ್ಪಾಡಿ ಕೆ. ಪಳನಿಸ್ವಾಮಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನೈನಾರ್ ನಾಗೇಂದ್ರನ್ ಸೇರಿದಂತೆ ಹಲವು ರಾಜಕೀಯ ನಾಯಕರು ವಿಜಯ್ ಅವರಿಗೆ ಶುಭಾಶಯ ಕೋರಿದರು.
ಮೋದಿ ಸಂದೇಶ
ಸಾಮಾಜಿಕ ಜಾಲತಾಣದಲ್ಲಿ ಶುಭಾಶಯ ತಿಳಿಸಿರುವ ಪ್ರಧಾನಿ ಮೋದಿ, ವಿಜಯ್ ಅವರು ದೀರ್ಘಾಯುಷ್ಯ ಹಾಗೂ ಉತ್ತಮ ಆರೋಗ್ಯ ಹೊಂದಿರಲಿ ಎಂದು ಹಾರೈಸಿದರು.
ಇದನ್ನೂ ಓದಿ:
ವಿವಿಧ ವಲಯಗಳಿಂದ ಅಭಿನಂದನೆ
ಮಕ್ಕಳ್ ನೀಧಿ ಮೈಯಂ ಅಧ್ಯಕ್ಷ ಕಮಲ್ ಹಾಸನ್, ಟಿಎಂಸಿ ನಾಯಕ ಜಿ.ಕೆ. ವಾಸನ್ ಸೇರಿದಂತೆ ಹಲವು ಗಣ್ಯರು ಹಾಗೂ ಟಿವಿಕೆ ಪಕ್ಷದ ಮುಖಂಡರು ಕೂಡ ಶುಭಾಶಯಗಳನ್ನು ಸಲ್ಲಿಸಿದರು.
ರಾಜಕೀಯದಲ್ಲಿ ಹೊಸ ಅಧ್ಯಾಯ
ಚಿತ್ರರಂಗದಿಂದ ರಾಜಕೀಯಕ್ಕೆ ಬಂದ ವಿಜಯ್, ಟಿವಿಕೆ ಪಕ್ಷ ಸ್ಥಾಪಿಸಿದ ಬಳಿಕ ವಿಧಾನಸಭೆ ಚುನಾವಣೆಯಲ್ಲಿ ಗಮನಾರ್ಹ ಸಾಧನೆ ಮಾಡಿ ಡಿಎಂಕೆ ಮೈತ್ರಿ ಬೆಂಬಲದೊಂದಿಗೆ ಸರ್ಕಾರ ರಚಿಸಿದ್ದರು. ಇದೀಗ ಮುಖ್ಯಮಂತ್ರಿಯಾಗಿ ಜನಸೇವೆ ಮುಂದುವರಿಸುತ್ತಿರುವ ಅವರಿಗೆ ವಿವಿಧ ವಲಯಗಳಿಂದ ಅಭಿನಂದನೆಗಳ ಮಹಾಪೂರವೇ ಹರಿದು ಬಂದಿದೆ.



