June 22, 2026
Monday, June 22, 2026
spot_img

ದೇವಾಲಯದ ಹಣ ದೇವರ ಸೇವೆಗೆ ಮಾತ್ರ: ಟಿವಿಕೆ ಸರ್ಕಾರದ ಮಹತ್ವದ ಹೆಜ್ಜೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ತಮಿಳುನಾಡಿನ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ನೇತೃತ್ವದ ಸರ್ಕಾರವು ದೇವಸ್ಥಾನಗಳ ನಿಧಿ ಬಳಕೆಗೆ ಸಂಬಂಧಿಸಿದಂತೆ ಮಹತ್ವದ ನಿರ್ಧಾರ ಕೈಗೊಂಡಿದೆ. ಹಿಂದಿನ ಆಡಳಿತದಲ್ಲಿ ಘೋಷಿಸಲಾಗಿದ್ದ ನೂರಾರು ಕೋಟಿ ರೂಪಾಯಿ ಮೌಲ್ಯದ ಹಲವು ಯೋಜನೆಗಳನ್ನು ರದ್ದುಗೊಳಿಸಿ, ದೇವಸ್ಥಾನಗಳ ಹಣವನ್ನು ಧಾರ್ಮಿಕ ಚಟುವಟಿಕೆಗಳು ಹಾಗೂ ಭಕ್ತರ ಸೌಲಭ್ಯಗಳಿಗೆ ಮಾತ್ರ ಮೀಸಲಿಡಲು ತೀರ್ಮಾನಿಸಲಾಗಿದೆ.

46 ಯೋಜನೆಗಳಿಗೆ ಸರ್ಕಾರದ ಬ್ರೇಕ್

ಹಿಂದಿನ ಆಡಳಿತದ ಅವಧಿಯಲ್ಲಿ ಪ್ರಸ್ತಾಪವಾಗಿದ್ದ 29 ಕಲ್ಯಾಣ ಮಂಟಪಗಳು ಹಾಗೂ 17 ವಾಣಿಜ್ಯ ಸಂಕೀರ್ಣಗಳ ನಿರ್ಮಾಣ ಯೋಜನೆಗಳನ್ನು ಸರ್ಕಾರ ಕೈಬಿಟ್ಟಿದೆ. ಒಟ್ಟಾರೆ ಸುಮಾರು 246 ಕೋಟಿ ರೂ. ವೆಚ್ಚದ ಈ ಯೋಜನೆಗಳ ಕಾಮಗಾರಿ ಆರಂಭವಾಗಿರಲಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದೇವಾಲಯ ಅಭಿವೃದ್ಧಿಗೆ ನಿಧಿ ಬಳಕೆ

ರದ್ದಾದ ಯೋಜನೆಗಳಿಗೆ ಮೀಸಲಾಗಿದ್ದ ಹಣವನ್ನು ಮತ್ತೆ ದೇವಸ್ಥಾನಗಳ ಖಾತೆಗೆ ವರ್ಗಾಯಿಸಲಾಗಿದೆ. ಈ ಮೊತ್ತವನ್ನು ಜೀರ್ಣೋದ್ಧಾರ, ಅನ್ನದಾಸೋಹ, ಧರ್ಮಶಾಲೆಗಳ ಅಭಿವೃದ್ಧಿ ಹಾಗೂ ಭಕ್ತರಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸಲು ಬಳಸಲಾಗುತ್ತದೆ.

ಇದನ್ನೂ ಓದಿ:

ಭಕ್ತರಿಂದ ಸ್ವಾಗತ, ಡಿಎಂಕೆಯಿಂದ ಟೀಕೆ

ಸರ್ಕಾರದ ನಿರ್ಧಾರಕ್ಕೆ ಹಿಂದೂ ಸಂಘಟನೆಗಳು ಮತ್ತು ಭಕ್ತರು ಬೆಂಬಲ ವ್ಯಕ್ತಪಡಿಸಿದ್ದರೆ, ಸಾಮಾಜಿಕ ಹಾಗೂ ಶೈಕ್ಷಣಿಕ ಉದ್ದೇಶಗಳ ಯೋಜನೆಗಳನ್ನು ರಾಜಕೀಯ ಕಾರಣಕ್ಕೆ ಕೈಬಿಡಲಾಗಿದೆ ಎಂದು ಡಿಎಂಕೆ ಆಕ್ಷೇಪ ವ್ಯಕ್ತಪಡಿಸಿದೆ.

ಧಾರ್ಮಿಕ ಉದ್ದೇಶಕ್ಕೆ ಮಾತ್ರ ಒತ್ತು

ದೇವಾಲಯಗಳ ಆದಾಯವನ್ನು ಮೂಲ ಧಾರ್ಮಿಕ ಚಟುವಟಿಕೆಗಳಿಗೆ ಬಳಸುವ ನಿಲುವಿಗೆ ಸರ್ಕಾರ ಬದ್ಧವಾಗಿದ್ದು, ಆಸ್ತಿಗಳ ನಿರ್ವಹಣೆ ಹಾಗೂ ಲೆಕ್ಕಪರಿಶೋಧನೆಗೂ ಹೆಚ್ಚಿನ ಆದ್ಯತೆ ನೀಡಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !