June 24, 2026
Wednesday, June 24, 2026
spot_img

ನವಿಲುಗರಿ ರೀಲ್ಸ್‌ಗೆ ಕಾನೂನು ಕಂಟಕ: ಬಿಗ್‌ಬಾಸ್ ಮಾಜಿ ಸ್ಪರ್ಧಿ ನಿವೇದಿತಾ-ಕಿಶನ್ ವಿರುದ್ಧ ದೂರು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ಒಂದು ರೀಲ್ಸ್ ವಿಡಿಯೋ ಇದೀಗ ಬಿಗ್‌ಬಾಸ್ ಮಾಜಿ ಸ್ಪರ್ಧಿಗಳಾದ ನಿವೇದಿತಾ ಗೌಡ ಹಾಗೂ ಡ್ಯಾನ್ಸರ್ ಕಿಶನ್ ಅವರಿಗೆ ಸಂಕಷ್ಟ ತಂದೊಡ್ಡಿದೆ. ನವಿಲುಗರಿಗಳಿಂದ ತಯಾರಿಸಿದ ಉಡುಪು ಧರಿಸಿ ವಿಡಿಯೋ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಇಬ್ಬರ ವಿರುದ್ಧ ಅರಣ್ಯ ಇಲಾಖೆಗೆ ದೂರು ಸಲ್ಲಿಸಲಾಗಿದೆ.

ವಿಡಿಯೋದಲ್ಲಿ ಏನಿದೆ?

ನಿವೇದಿತಾ ಗೌಡ ಮತ್ತು ಕಿಶನ್ ಅವರು ‘ಹೇ ನವಿಲೇ ನವಿಲೇ’ ಹಾಡಿಗೆ ಹೆಜ್ಜೆ ಹಾಕಿರುವ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದರು. ಈ ವೇಳೆ ನೈಜ ನವಿಲುಗರಿಗಳನ್ನು ಬಳಸಿ ತಯಾರಿಸಲಾದ ಉಡುಪು ಧರಿಸಲಾಗಿದೆ ಎಂಬ ಆರೋಪ ಕೇಳಿಬಂದಿದೆ.

ಅರಣ್ಯ ಇಲಾಖೆಗೆ ದೂರು

ಸಾಮಾಜಿಕ ಹೋರಾಟಗಾರ ದಿನೇಶ್ ಕಲ್ಲಹಳ್ಳಿ ಅವರು ಈ ಸಂಬಂಧ ಬೆಂಗಳೂರು ಪ್ರಾದೇಶಿಕ ನಗರ ವಿಭಾಗ ವ್ಯಾಪ್ತಿಯ ಕಗ್ಗಲಿಪುರ ಅರಣ್ಯ ವಲಯ ಅಧಿಕಾರಿಗಳಿಗೆ ದೂರು ನೀಡಿದ್ದಾರೆ. ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸುವಂತೆ ಅವರು ಮನವಿ ಮಾಡಿದ್ದಾರೆ.

ಇದನ್ನೂ ಓದಿ:

ಕಾನೂನು ಉಲ್ಲಂಘನೆ ಆರೋಪ

ವನ್ಯಜೀವಿ ಸಂರಕ್ಷಣಾ ಕಾಯ್ದೆ-1972ರ ನಿಯಮಗಳಿಗೆ ವಿರುದ್ಧವಾಗಿ ನವಿಲುಗರಿಗಳನ್ನು ಬಳಸಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಪ್ರಕರಣದಲ್ಲಿ ಪಾರದರ್ಶಕ ತನಿಖೆ ನಡೆಸಬೇಕು ಎಂದು ಸಹ ಒತ್ತಾಯಿಸಲಾಗಿದೆ.

ಅಧಿಕಾರಿಗಳ ಮುಂದಿನ ಕ್ರಮದತ್ತ ಚಿತ್ತ

ದೂರಿನ ಆಧಾರದ ಮೇಲೆ ಅರಣ್ಯ ಇಲಾಖೆ ಯಾವ ರೀತಿಯ ಕ್ರಮ ಕೈಗೊಳ್ಳುತ್ತದೆ ಎಂಬುದು ಇದೀಗ ಕುತೂಹಲಕ್ಕೆ ಕಾರಣವಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳ ಪರಿಶೀಲನೆ ಮುಂದುವರಿಯುವ ಸಾಧ್ಯತೆ ಇದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !