ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿವಿಧ ಕ್ಷೇತ್ರಗಳಲ್ಲಿ ವಿಶಿಷ್ಟ ಸೇವೆ ಸಲ್ಲಿಸಿರುವ ಕರ್ನಾಟಕದ ಐವರು ಗಣ್ಯರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪದ್ಮ ಪ್ರಶಸ್ತಿ ಪ್ರದಾನ ಮಾಡಿದರು.
ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಮಹತ್ವದ ಕೊಡುಗೆ ನೀಡಿರುವ ಕೆಎಲ್‌ಇ ಸಂಸ್ಥೆಯ ಅಧ್ಯಕ್ಷ ಡಾ. ಪ್ರಭಾಕರ್ ಕೋರೆ ಅವರಿಗೆ ಗೌರವ ಸಂದಿದೆ. ದೂರದರ್ಶನ ಹಾಗೂ ಆಕಾಶವಾಣಿಯ ಆಧುನೀಕರಣದಲ್ಲಿ ಪ್ರಮುಖ ಪಾತ್ರವಹಿಸಿದ್ದ ಶಶಿ ಶೇಖರ್ ವೇಂಪತಿ ಅವರಿಗೂ ಪ್ರಶಸ್ತಿ ಲಭಿಸಿದೆ.
ಹಿಮೋಫಿಲಿಯಾ ರೋಗಿಗಳಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ದೊರಕುವಂತೆ ಶ್ರಮಿಸಿದ ವೈದ್ಯ ಡಾ. ಸುರೇಶ್ ಹನಗವಾಡಿ ಅವರ ಸೇವೆಯನ್ನು ದೇಶ ಗುರುತಿಸಿದೆ.
ಇದನ್ನೂ ಓದಿ:
ರಕ್ಷಣಾ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಮಹತ್ವದ ಸಾಧನೆ ಮಾಡಿದ ವಿಜ್ಞಾನಿ ಡಾ. ಶುಭಾ ವೆಂಕಟೇಶ್ ಅಯ್ಯಂಗಾರ್ ಅವರಿಗೂ ಪದ್ಮ ಗೌರವ ಲಭಿಸಿದೆ.
ಪ್ರೆಸ್ಟೀಜ್ ಸಂಸ್ಥೆಯನ್ನು ಜಾಗತಿಕ ಮಟ್ಟಕ್ಕೆ ಬೆಳೆಸಿದ ಉದ್ಯಮಿ ಟಿ.ಟಿ. ಜಗನ್ನಾಥನ್ ಅವರಿಗೆ ಮರಣೋತ್ತರವಾಗಿ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಈ ಗೌರವಗಳು ಕರ್ನಾಟಕದ ಸಾಧಕರ ಸೇವೆಗೆ ರಾಷ್ಟ್ರೀಯ ಮಟ್ಟದ ಮನ್ನಣೆಯಾಗಿ ಪರಿಣಮಿಸಿವೆ.



