October 16, 2026
Friday, October 16, 2026
spot_img

ರಾತ್ರಿಯಿಡೀ ನಡೆದ ರಿಪೇರಿ, ನೇರಳೆ ಮಾರ್ಗದಲ್ಲಿ ಮತ್ತೆ ಮೆಟ್ರೋ ಸಂಚಾರ ಆರಂಭ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣದಲ್ಲಿ ಉಂಟಾಗಿದ್ದ ತಾಂತ್ರಿಕ ದೋಷವನ್ನು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಕಾರ್ಯಾಚರಣೆ ಮತ್ತು ನಿರ್ವಹಣಾ ತಂಡಗಳು ಯಶಸ್ವಿಯಾಗಿ ಸರಿಪಡಿಸಿವೆ. ನಿನ್ನೆ ತಾತ್ಕಾಲಿಕವಾಗಿ ಮೆಟ್ರೋ ಸೇವೆ ಬಂದ್‌ ಆಗಿದ್ದು, ಜನರು ತೊಂದರೆ ಅನುಭವಿಸಿದ್ದರು. ಇದೀಗ ಮೆಟ್ರೋ ಸಂಚಾರದ ಸಹಜ ಸ್ಥಿತಿಗೆ ಬಂದಿದೆ.

ಬಿಎಂಆರ್‌ಸಿಎಲ್ ಪ್ರಕಟಿಸಿರುವ ಮಾಹಿತಿಯ ಪ್ರಕಾರ, ಜೂನ್ 24, 2026ರ ಬೆಳಿಗ್ಗೆ 5 ಗಂಟೆಯಿಂದ ನೇರಳೆ ಮಾರ್ಗದಾದ್ಯಂತ ಮೆಟ್ರೋ ರೈಲು ಸಂಚಾರವು ನಿಯಮಿತ ವೇಳಾಪಟ್ಟಿಯಂತೆ ಸಂಪೂರ್ಣವಾಗಿ ಪುನರಾರಂಭಗೊಂಡಿದೆ. ಪ್ರಯಾಣಿಕರು ಯಾವುದೇ ಆತಂಕವಿಲ್ಲದೆ ಎಂದಿನಂತೆ ಮೆಟ್ರೋ ಸೇವೆಗಳನ್ನು ಬಳಸಿಕೊಳ್ಳಬಹುದು ಎಂದು ತಿಳಿಸಲಾಗಿದೆ. ತಾಂತ್ರಿಕ ದೋಷದಿಂದಾಗಿ ಮಂಗಳವಾರ ಸಂಜೆ ಕಬ್ಬನ್ ಪಾರ್ಕ್ ನಿಲ್ದಾಣದ ಬಳಿ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದ್ದು, ಕೆಲ ಅವಧಿಗೆ ನೇರಳೆ ಮಾರ್ಗದಲ್ಲಿ ಭಾಗಶಃ ಸೇವೆ ಮಾತ್ರ ಲಭ್ಯವಿತ್ತು. ನಂತರ ದೋಷ ಪತ್ತೆಹಚ್ಚಿ ತ್ವರಿತವಾಗಿ ದುರಸ್ತಿ ಕಾರ್ಯ ಕೈಗೊಳ್ಳಲಾಯಿತು.

ಈ ಸಂದರ್ಭದಲ್ಲಿ ನಿಮಗೆಲ್ಲಾ ಸಾಕಷ್ಟು ತೊಂದರೆ ಆಗಿದೆ ಎನ್ನುವುದು ನಮ್ಮ ಗಮನಕ್ಕೆ ಬಂದಿದೆ. ತಾಳ್ಮೆ ಹಾಗೂ ಗೌರವದಿಂದ ನಡೆದುಕೊಂಡ ಎಲ್ಲರಿಗೂ ಧನ್ಯವಾದಗಳು. ಮುಂದೆ ಈ ರೀತಿಯ ಸಮಸ್ಯೆಗಳು ಬಾರದಂತೆ ನೋಡಿಕೊಳ್ಳುತ್ತೇವೆ. ಎಂದಿನಂತೆ ಮೆಟ್ರೋ ಸೇವೆಯನ್ನು ಬಳಸಿ ಎಂದು ಬಿಎಂಆರ್‌ಸಿಎಲ್‌ ಹೇಳಿದೆ.

Must Read