August 23, 2026
Sunday, August 23, 2026
spot_img

ಗ್ರಾಹಕರಿಗೆ ಭರ್ಜರಿ ಸಿಹಿ ಸುದ್ದಿ: ಸತತವಾಗಿ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೇಶಿಯ ಮಾರುಕಟ್ಟೆಯಲ್ಲಿ ಚಿನ್ನ ಹಾಗೂ ಬೆಳ್ಳಿ ಬೆಲೆಯಲ್ಲಿ ಭಾರಿ ಕುಸಿತ ಕಂಡುಬಂದಿದೆ. ಜೂನ್ ತಿಂಗಳಲ್ಲಿ ಭಾರತದಲ್ಲಿ ಬಂಗಾರದ ದರ ಶೇ. 12ರಷ್ಟು ಇಳಿಕೆಯಾಗಿದ್ದರೆ, ಬೆಳ್ಳಿ ಬೆಲೆ ಶೇ. 15ಕ್ಕಿಂತಲೂ ಹೆಚ್ಚು ಪ್ರಮಾಣದಲ್ಲಿ ಕರಗಿದೆ. ಕೇವಲ ಎರಡೇ ದಿನಗಳಲ್ಲಿ ಚಿನ್ನದ ಬೆಲೆಯಲ್ಲಿ 335 ರೂಪಾಯಿಗಳಷ್ಟು ಕಡಿತವಾಗಿದ್ದು, ಬುಧವಾರದಂದು ಜಾಗತಿಕ ಮಾರುಕಟ್ಟೆಯಲ್ಲೂ ಚಿನ್ನದ ದರ ತಗ್ಗಿದೆ.

ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ಬೆಲೆ ಎಷ್ಟು?

ಪ್ರಸ್ತುತ ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ದೇಶಾದ್ಯಂತ ಚಿನ್ನದ ಬೆಲೆ ಇಂತಿದೆ:

  • 22 ಕ್ಯಾರೆಟ್ ಚಿನ್ನ (10 ಗ್ರಾಂ): ₹1,32,300
  • 24 ಕ್ಯಾರೆಟ್ ಅಪರಂಜಿ ಚಿನ್ನ (10 ಗ್ರಾಂ): ₹1,44,330
  • ಬೆಳ್ಳಿ ದರ (100 ಗ್ರಾಂ): ₹24,500

ನೆರೆರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಅಗ್ಗ!

ಬೆಂಗಳೂರಿನಲ್ಲಿ 100 ಗ್ರಾಂ ಬೆಳ್ಳಿ ಬೆಲೆ ₹24,500 ರಷ್ಟಿದ್ದರೆ, ತಮಿಳುನಾಡು ಮತ್ತು ಕೇರಳ ಸೇರಿದಂತೆ ದೇಶದ ಕೆಲವು ಪ್ರಮುಖ ಭಾಗಗಳಲ್ಲಿ ಬೆಳ್ಳಿಯ ದರ ₹25,000 ತಲುಪಿದೆ. ನೆರೆರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಆಭರಣ ಪ್ರಿಯರಿಗೆ ಸ್ವಲ್ಪ ಮಟ್ಟಿಗೆ ನಿರಾಳತೆ ಸಿಕ್ಕಂತಾಗಿದೆ. ಚಿನ್ನ ಖರೀದಿಸಲು ಯೋಜಿಸುತ್ತಿರುವವರಿಗೆ ಇದು ಉತ್ತಮ ಸಮಯ ಎನ್ನಬಹುದು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !