September 4, 2026
Friday, September 4, 2026
spot_img

ಹರಿಹರದಲ್ಲಿ ಅರೆಸ್ಟ್‌ ಆದ ಶಂಕಿತ ಉಗ್ರನಿಗೆ ಅಯೋಧ್ಯೆಯ ರಾಮಮಂದಿರ ಸ್ಫೋಟಿಸುವ ಪ್ಲಾನ್‌ ಇತ್ತಂತೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ದಾವಣಗೆರೆಯ ಹರಿಹರದಲ್ಲಿ ಶಂಕಿತ ಉಗ್ರನನ್ನು ಬಂಧಿಸಲಾಗಿದ್ದು, ಈತ ಅಯೋಧ್ಯೆಯ ರಾಮಮಂದಿರವನ್ನು ಬ್ಲಾಸ್ಟ್‌ ಮಾಡಲು ಸ್ಕೆಚ್‌ ಹಾಕಿದ್ದ ಎನ್ನುವ ಸ್ಪೋಟಕ ಮಾಹಿತಿ ಸಿಕ್ಕಿದೆ.

ವಿಚಾರಣೆ ವೇಳೆ ಬಾಯ್ಬಿಟ್ಟ ಶಂಕಿತ ಉಗ್ರ ಉತ್ತರ ಪ್ರದೇಶ ಮೂಲದ ಸುಹೇಲ್‌ ಅಯೋಧ್ಯೆಯ ರಾಮಮಂದಿರವನ್ನು ಛಿದ್ರ ಮಾಡೋಕೆ ತಯಾರಿ ನಡೆಸಿದ್ದ ಎಂದು ಹೇಳಿಕೊಂಡಿದ್ದಾನೆ. ಕೋಟ್ಯಂತರ ಹಿಂದುಗಳ ಆರಾಧ್ಯ ದೈವದ ನೆಲೆಯಾದ ಉತ್ತರ ಪ್ರದೇಶದ ಅಯೋಧ್ಯೆಯ ರಾಮ ಮಂದಿರವನ್ನು ಬಾಂಬ್ ಇಟ್ಟು ಸ್ಫೋಟಿಸಲು ನಾನು ಬಯಸಿದ್ದೆ ಎಂದು ಹೇಳಿದ್ದಾನೆ.

ಪೊಲೀಸರು ಈತನ ಫೋನ್‌ ಚೆಕ್‌ ಮಾಡಿದ್ದು, ಅದರಲ್ಲಿ ಪಾಕಿಸ್ತಾನದ ಕೋಡ್‌ ಹೊಂದಿರುವ ಗ್ರೂಪ್‌ಗಳಿವೆ. ಇದರಲ್ಲಿ ಮಾರಕಾಸ್ತ್ರಗಳನ್ನು ಹೊಂದಿರುವ ಫೋಟೊಗಳು ಕೂಡ ಇವೆ, ಭಾರತದಲ್ಲಿ ದೊಡ್ಡ ಮಟ್ಟದ ವಿಧ್ವಂಸಕ ಹಾಗೂ ಸಮಾಜ ಘಾತಕ ಚಟುವಟಿಕೆಗಳನ್ನು ನಡೆಸಿ ಸಾವು-ನೋವು ಸೃಷ್ಟಿಸಲು ಈತ ಮತ್ತು ಈತನ ತಂಡ ಸಂಚು ರೂಪಿಸಿತ್ತು ಎಂಬುದು ಪ್ರಾಥಮಿಕ ತನಿಖೆಯಿಂದ ದೃಢಪಟ್ಟಿದೆ. ಆರೋಪಿಯನ್ನು ಹೆಚ್ಚಿನ ತನಿಖೆಗಾಗಿ ಮಂಗಳವಾರ ಸಂಜೆ ತುಮಕೂರು ಪೊಲೀಸರಿಗೆ ಹಸ್ತಾಂತರಿಸಲಾಗಿದೆ.

ಇಷ್ಟೇ ಅಲ್ಲದೇ ಈತ ಅಂತಾರಾಷ್ಟ್ರೀಯ ಉಗ್ರಜಾಲದೊಂದಿಗೂ ಸಂಪರ್ಕ ಹೊಂದಿದ್ದಾನೆ. ಫೋನ್‌ನಲ್ಲಿ ಪಾಕಿಸ್ತಾನದ ಕಂಟ್ರಿ ಕೋಡ್ ಹೊಂದಿರುವ ಮೊಬೈಲ್ ಸಂಖ್ಯೆಯೊಂದು ‘ರಾಣಾ ಬಾಯ್’ ಎಂಬ ಹೆಸರಿನಲ್ಲಿ ಸೇವ್ ಆಗಿರುವುದು ಪತ್ತೆಯಾಗಿದೆ.

ಬಂಧಿತ ಶಂಕಿತ ಉಗ್ರ ಸುಹೇಲ್ ಹರಿಹರ ಪಕ್ಕದ ಕೈಗಾರಿಕಾ ಪ್ರದೇಶದ ಫ್ಯಾಕ್ಟರಿಯೊಂದರಲ್ಲಿ ಸಾಮಾನ್ಯ ಪೇಂಟಿಂಗ್ ಕೆಲಸಗಾರನಾಗಿ ಸೇರಿಕೊಂಡು ಯಾರಿಗೂ ಅನುಮಾನ ಬಾರದಂತೆ ಅಡಗಿಕೊಂಡಿದ್ದ. ಈತನ ಚಟುವಟಿಕೆಗಳ ಮೇಲೆ ನಿಗಾ ಇಟ್ಟಿದ್ದ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದು, ಹರಿಹರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !