June 24, 2026
Wednesday, June 24, 2026
spot_img

ಬಸವಾದಿ ಶರಣರ ಸಮಾವೇಶಕ್ಕೆ ಹೈಕೋರ್ಟ್ ಒಪ್ಪಿಗೆ: ಆಯೋಜಕರಿಗೆ ಕಟ್ಟುನಿಟ್ಟಿನ ಸೂಚನೆ

ಹೊಸದಿಗಂತ ವರದಿ ಕಲಬುರಗಿ:

ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ಮುಂಬರುವ ಜೂನ್ 28ರಂದು ನಡೆಯಲಿರುವ ಬಸವಾದಿ ಶರಣರ ಬೃಹತ್ ಹಿಂದೂ ಸಮಾವೇಶಕ್ಕೆ ಕರ್ನಾಟಕ ಹೈಕೋರ್ಟ್‌ನ ಕಲಬುರಗಿ ಪೀಠವು ಷರತ್ತುಬದ್ಧ ಅನುಮತಿ ನೀಡಿದೆ.

ಕಾರ್ಯಕ್ರಮದಲ್ಲಿ ಕನೇರಿ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ಭಾಗವಹಿಸಲು ಅವಕಾಶ ನೀಡಲಾಗಿದ್ದು,ಅವರು ಭಾಷಣ ಮಾಡದಂತೆ ಅಫಿಡವಿಟ್ ಸಲ್ಲಿಸಿರುವ ಹಿನ್ನೆಲೆಯಲ್ಲಿ ನ್ಯಾಯಾಲಯ ಈ ಅನುಮತಿ ನೀಡಿದೆ. ಕಾರ್ಯಕ್ರಮದಲ್ಲಿ ಗರಿಷ್ಠ 2,500 ಜನರು ಭಾಗವಹಿಸಬಹುದೆಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

ಇದನ್ನೂ ಓದಿ:

ಸಮಾವೇಶದ ವೇಳೆ ಯಾವುದೇ ರೀತಿಯಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ಕಾರ್ಯಕ್ರಮವನ್ನು ನಡೆಸಬೇಕು ಎಂದು ನ್ಯಾಯಾಲಯ ಸೂಚಿಸಿದ್ದು, ಒಂದು ವೇಳೆ ಕಾನೂನು ಸುವ್ಯವಸ್ಥೆ ಹದಗೆಟ್ಟರೆ ಅದರ ಸಂಪೂರ್ಣ ಹೊಣೆಗಾರಿಕೆಯನ್ನು ಕಾರ್ಯಕ್ರಮದ ಆಯೋಜಕರೇ ಹೊರಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದೆ.

ಕನೇರಿಯ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ಪರವಾಗಿ ಹಿರಿಯ ವಕೀಲ ವೆಂಕಟೇಶ್ ದಳವಾಯಿ ವಾದ ಮಂಡಿಸಿದರೆ,ರಾಜ್ಯ ಸರ್ಕಾರದ ಪರವಾಗಿ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ವಾದ ಮಂಡಿಸಿದರು. ಎರಡೂ ಕಡೆಯ ವಾದ-ಪ್ರತಿವಾದಗಳನ್ನು ಆಲಿಸಿದ ನ್ಯಾಯಮೂರ್ತಿ ಎಸ್.ಆರ್. ಕೃಷ್ಣಕುಮಾರ್ ಅವರು ಸಮಾವೇಶಕ್ಕೆ ಷರತ್ತುಬದ್ಧ ಅನುಮತಿ ನೀಡಿ ಆದೇಶ ಹೊರಡಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !