October 17, 2026
Saturday, October 17, 2026
spot_img

‘ಆರೋಗ್ಯಕರ ವಯಸ್ಸಿಗೆ ಯೋಗ’: ಕುವೈಟ್‌ನಲ್ಲಿ ಭಾರತೀಯ ರಾಯಭಾರ ಕಚೇರಿಯಿಂದ 12ನೇ ಯೋಗ ದಿನಾಚರಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕುವೈಟ್‌ನ ಭಾರತೀಯ ರಾಯಭಾರ ಕಚೇರಿಯು ಜೂನ್ 20 ರಂದು ಬೊಲೆವಾರ್ಡ್ ಕ್ರಿಕೆಟ್ ಕ್ರೀಡಾಂಗಣದಲ್ಲಿ “ಆರೋಗ್ಯಕರ ವಯಸ್ಸಿಗೆ ಯೋಗ” ಎಂಬ ಘೋಷಣೆಯಡಿ 12ನೇ ಅಂತಾರಾಷ್ಟ್ರೀಯ ಯೋಗ ದಿನವನ್ನು ಆಚರಿಸಿತು.

ಜೂ.19 ರಿಂದ 21ರವರೆಗೆ ನಡೆದ 3 ದಿನಗಳ ಯೋಗ ಉತ್ಸವದ ಅಂಗವಾಗಿ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು. ರಾಯಭಾರ ಕಚೇರಿಯ ಕೋರಿಕೆಯ ಮೇರೆಗೆ ಭಾರತೀಯ ಪ್ರವಾಸಿ ಪರಿಷತ್ (ಬಿಪಿಪಿ) ಕುವೈಟ್‌ನ 100 ಸದಸ್ಯರು ಸ್ವಯಂಸೇವಕರಾಗಿ ಪಾಲ್ಗೊಂಡರು.

ಕುವೈಟ್ ಯೋಗ ಸಮಿತಿಯ ಅಧ್ಯಕ್ಷೆ ಹಾಗೂ ಪದ್ಮಶ್ರೀ ಪುರಸ್ಕೃತೆ ಎಚ್.ಇ. ಶೇಖ ಶೇಖ ಅಲ್ ಸಬಾ ಮತ್ತು ಸೌದಿ ಅರೇಬಿಯಾದ ಅರಬ್ ಯೋಗ ಫೌಂಡೇಶನ್ ಸಂಸ್ಥಾಪಕಿ ಹಾಗೂ ಏಷ್ಯನ್ ಯೋಗಾಸನ ಕ್ರೀಡಾ ಒಕ್ಕೂಟದ ಅಧ್ಯಕ್ಷೆ ಪದ್ಮಶ್ರೀ ಪುರಸ್ಕೃತೆ ನೌಫ್ ಮರುವಾಇ ಮುಖ್ಯ ಅತಿಥಿಗಳಾಗಿದ್ದರು.

ಕಾರ್ಯಕ್ರಮದಲ್ಲಿ ರಾಜತಾಂತ್ರಿಕರು, ಸರ್ಕಾರಿ ಅಧಿಕಾರಿಗಳು, ಸಮುದಾಯ ಮುಖಂಡರು, ವಿದ್ಯಾರ್ಥಿಗಳು ಹಾಗೂ ಯೋಗಾಸಕ್ತರು ಸೇರಿದಂತೆ 2200ಕ್ಕೂ ಹೆಚ್ಚು ಮಂದಿ ಸಾಮೂಹಿಕ ಯೋಗಾಭ್ಯಾಸದಲ್ಲಿ ಭಾಗವಹಿಸಿದರು. “ಯೋಗ ಇನ್ ಫೋಕಸ್” ಛಾಯಾಚಿತ್ರ ಸ್ಪರ್ಧೆಯ ಚಿತ್ರಕಲಾ ಪ್ರದರ್ಶನ ಮತ್ತು ಯೋಗ-ವಿಷಯದ ವರ್ಣಚಿತ್ರಗಳ ಪ್ರದರ್ಶನವನ್ನು ಆಯೋಜಿಸಲಾಗಿತ್ತು.

Must Read