June 26, 2026
Friday, June 26, 2026
spot_img

ಲೋಪ ಆಗಿರೋದನ್ನು ನಾವು ಒಪ್ಪಿಕೊಳ್ತೇವೆ: ನೀಟ್ ಮರುಪರೀಕ್ಷೆ ಯಶಸ್ವಿ ಎಂದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ನೀಟ್-2026 ಪರೀಕ್ಷೆಗೆ ಸಂಬಂಧಿಸಿದ ವಿವಾದ ಮತ್ತು ಪ್ರಶ್ನೆಪತ್ರಿಕೆ ಸೋರಿಕೆ ಆರೋಪಗಳ ನಡುವೆ ಕೇಂದ್ರ ಸರ್ಕಾರ ಮಹತ್ವದ ಸ್ಪಷ್ಟನೆ ನೀಡಿದೆ. ಪರೀಕ್ಷಾ ಪ್ರಕ್ರಿಯೆಯಲ್ಲಿ ಕಂಡುಬಂದ ಲೋಪಗಳನ್ನು ಸರಿಪಡಿಸಿದ ಬಳಿಕ ಮರುಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲಾಗಿದೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಿಳಿಸಿದ್ದಾರೆ.

ಲೋಪಗಳ ಒಪ್ಪಿಗೆ

ಪರೀಕ್ಷಾ ಪ್ರಕ್ರಿಯೆಯಲ್ಲಿ ಕೆಲವು ಕೊರತೆಗಳು ಕಂಡುಬಂದಿದ್ದವು. ಅವುಗಳನ್ನು ಗುರುತಿಸಿ ತಕ್ಷಣವೇ ಅಗತ್ಯ ಕ್ರಮ ಕೈಗೊಂಡು ವ್ಯವಸ್ಥೆಯನ್ನು ಬಲಪಡಿಸಲಾಗಿದೆ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.

ವಿದ್ಯಾರ್ಥಿಗಳಿಗೆ ಭರವಸೆ

ನೀಟ್ ಅಭ್ಯರ್ಥಿಗಳು ಹಾಗೂ ಅವರ ಕುಟುಂಬಗಳು ಆತಂಕ ಪಡುವ ಅಗತ್ಯವಿಲ್ಲ. ವಿದ್ಯಾರ್ಥಿಗಳ ಭವಿಷ್ಯಕ್ಕೆ ಯಾವುದೇ ಹಾನಿಯಾಗದಂತೆ ಸರ್ಕಾರ ಸಂಪೂರ್ಣ ಬದ್ಧವಾಗಿದೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ:

ಪೇಪರ್ ಮಾಫಿಯಾಗೆ ಕಠಿಣ ಕ್ರಮ

ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಇಂತಹ ಪ್ರಕರಣಗಳ ತ್ವರಿತ ವಿಚಾರಣೆಗೆ ವಿಶೇಷ ನ್ಯಾಯಾಲಯ ಸ್ಥಾಪಿಸುವ ಯೋಜನೆಯೂ ಸರ್ಕಾರದ ಮುಂದಿದೆ ಎಂದು ಪ್ರಧಾನ್ ಹೇಳಿದ್ದಾರೆ.

ಭದ್ರತೆಯಲ್ಲಿ ಹೊಸ ಮಾನದಂಡ

ಮರುಪರೀಕ್ಷೆಯಲ್ಲಿ ದೇಶದಾದ್ಯಂತ ಸಾವಿರಾರು ಪರೀಕ್ಷಾ ಕೇಂದ್ರಗಳಲ್ಲಿ ಕಠಿಣ ಭದ್ರತಾ ಕ್ರಮಗಳನ್ನು ಜಾರಿಗೊಳಿಸಲಾಗಿತ್ತು. ಬಯೋಮೆಟ್ರಿಕ್ ಪರಿಶೀಲನೆ, ಸಿಸಿಟಿವಿ ನಿಗಾ, ಫೇಸ್ ಆಕ್ಸೆಸ್ ಹಾಗೂ ಎರಡು ಹಂತದ ತಪಾಸಣೆ ಮೂಲಕ ಪರೀಕ್ಷಾ ಪ್ರಕ್ರಿಯೆಯನ್ನು ಸುರಕ್ಷಿತಗೊಳಿಸಲಾಗಿದೆ.

ರಾಜಕೀಯ ಟೀಕೆಗೆ ತಿರುಗೇಟು

ವಿದ್ಯಾರ್ಥಿಗಳ ಮನಸ್ಸಿನಲ್ಲಿ ಭಯ ಹುಟ್ಟಿಸುವ ರಾಜಕೀಯ ಸರಿಯಲ್ಲ ಎಂದು ಹೇಳಿದ ಸಚಿವರು, ಯುವಕರನ್ನು ಗೊಂದಲಕ್ಕೆ ದೂಡುವ ಪ್ರಯತ್ನಗಳನ್ನು ವಿರೋಧಿಸಿದರು. ಮರುಪರೀಕ್ಷೆಯಲ್ಲಿ 20 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿರುವುದಾಗಿ ಎನ್‌ಟಿಎ ಮಾಹಿತಿ ನೀಡಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !