ಹೊಸದಿಗಂತ ವರದಿ ಕೊಪ್ಪಳ :
ತುಂಗಭದ್ರಾ ಅಣೆಕಟ್ಟಿನ ಎಲ್ಲಾ 33 ಹೊಸ ಕ್ರಸ್ಟ್ ಗೇಟ್ಗಳ ಉದ್ಘಾಟನೆ ಕಾರ್ಯಕ್ರಮದ ಹಿನ್ನೆಲೆ ಮುನಿರಬಾದ್ ರಿಸರ್ವ್ ಪೊಲೀಸ್ ಕವಯಾತು ಮೈದಾನಕ್ಕೆ ತೆಲಂಗಾಣ ಮುಖ್ಯಮಂತ್ರಿ ಎ.ರೇವಂತ್ರೆಡ್ಡಿ ಹಾಗೂ ನಮ್ಮ ಸಿಎಂ ಡಿ.ಕೆ. ಶಿವಕುಮಾರ್ ಆಗಮಿಸಿದ್ದು, ಜಿಲ್ಲಾಡಳಿತದ ವತಿಯಿಂದ ಅದ್ಧೂರಿ ಸ್ವಾಗತ ಕೋರಲಾಗಿದೆ.
ಎ.ರೇವಂತ್ ರೆಡ್ಡಿ ಅವರೊಂದಿಗೆ ನೀರಾವರಿ ಇಲಾಖೆ ಸಚಿವ ಎನ್.ಉತ್ತಮ್ ಕುಮಾರ್ ರೆಡ್ಡಿ ಸಹ ಆಗಮಿಸಿದ್ದಾರೆ. ಈ ವೇಳೆ ಶಾಸಕ ಬಸವರಾಜ ರಾಯರೆಡ್ಡಿ, ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತೆ ಜಹೀರಾ ನಸೀಂ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಹೇಮಂತಕುಮಾರ್ ಸೇರಿದಂತೆ ಜನಪ್ರತಿನಿಧಿಗಳು ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಸಿಎಂ ಡಿಕೆಶಿ ಸ್ವಾಗತದ ವೇಳೆ ಸಂಸದ ರಾಜಶೇಖರ ಹಿಟ್ನಾಳ್, ರಾಜ್ಯಸಭಾ ಸಂಸದ ಡಾ.ಸೈಯದ್ ನಾಸಿರ್ ಹುಸೇನ್, ಶಾಸಕರಾದ ಹೆಚ್.ಕೆ.ಪಾಟೀಲ್,ಶಿವರಾಜ ತಂಗಡಿ, ಕೆ.ರಾಘವೇಂದ್ರ ಹಿಟ್ನಾಳ್, ಬಸವರಾಜ ರಾಯರೆಡ್ಡಿ, ಜಿ.ಎನ್.ಗಣೇಶ್,ಮಾಜಿ ಸಚಿವ ಅಮರೇಗೌಡ ಪಾಟೀಲ್ ಬೈಯಾಪುರ, ಬಳ್ಳಾರಿ ವಲಯದ ಪೊಲೀಸ್ ಮಹಾ ನಿರೀಕ್ಷಕ ಡಾ.ಪಿ.ಎಸ್. ಹರ್ಷ, ಜಿಲ್ಲಾಧಿಕಾರಿ ಡಾ.ಸುರೇಶ್ ಇಟ್ನಾಳ್, ಜಿ.ಪಂ. ಸಿಇಓ ರ್ವಣೀತ್ ನೇಗಿ ಸೇರಿದಂತೆ ಜನಪ್ರತಿನಿಧಿಗಳು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.



