Sunday, January 11, 2026

ನಂಬರ್ ಬ್ಲಾಕ್ ಮಾಡಿದ ಲವ್ವರ್: ಮನನೊಂದ ಡೆತ್‌ನೋಟ್ ಬರೆದಿಟ್ಟು ವಿದ್ಯಾರ್ಥಿ ನೇಣಿಗೆ ಶರಣು

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಲವ್ವರ್ ನಂಬರ್ ಬ್ಲಾಕ್ ಮಾಡಿದ್ದಕ್ಕೆ ಮನನೊಂದ ವಿದ್ಯಾರ್ಥಿ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಪೇರೇಸಂದ್ರ ಗ್ರಾಮದ ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ನಡೆದಿದೆ.

ಕೇರಳದ ವಯನಾಡು ಮೂಲದ ಮೊಹಮ್ಮದ್ ಶಬ್ಬೀರ್ (26) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಖಾಸಗಿ ಕಾಲೇಜಿನಲ್ಲಿ ಆರ್‌ಸಿಟಿ ಎನ್ನುವ ಅಲೈಡ್ ಸೈನ್ಸ್ ಕೋರ್ಸ್‌ನ ಅಂತಿಮ ವರ್ಷದಲ್ಲಿ ಅಧ್ಯಯನ ಮಾಡುತ್ತಿದ್ದನು.

ಇನ್ನೇನು ಕೆಲವೇ ತಿಂಗಳುಗಳಲ್ಲಿ ಕೋರ್ಸ್ ಮುಗಿಸಿ ಮನೆಗೆ ಮರಳಬೇಕಿದ್ದ ವಿದ್ಯಾರ್ಥಿ ಭಾನುವಾರ (ಸೆ.7) ಬೆಳಗ್ಗೆ ಹಾಸ್ಟೆಲ್‌ನ ರೂಮ್‌ನಲ್ಲಿ ಶವವಾಗಿ ಪತ್ತೆಯಾಗಿದ್ದು, ರೂಮ್‌ನ ಕಿಟಕಿಗೆ ಟವೆಲ್‌ ಕಟ್ಟಿ, ಅದರಿಂದ ಕತ್ತು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ವಿಷಯ ತಿಳಿದ ಪೇರೇಸಂದ್ರ ಠಾಣಾ ಪೊಲೀಸರು ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾದ ರೂಮ್‌ ಪರಿಶೀಲನೆ ನಡೆಸಿದಾಗ ಡೆತ್‌ನೋಟ್ ಸಿಕ್ಕಿದೆ.

ಡೆತ್‌ನೋಟ್‌ನಲ್ಲಿ ಏನಿದೆ?
I didn’t stop anything until…. I always love you forever , You are my first and you are My last ಎಂದು ಬರೆದಿದ್ದಾನೆ.

ಡೆತ್‌ನೋಟ್‌ನಲ್ಲಿ ಬರೆದಿರುವಂತೆ ಮೃತ ವಿದ್ಯಾರ್ಥಿ ಶಬ್ಬೀರ್ ತನ್ನ ಸಹಪಾಠಿಯೊಬ್ಬಳನ್ನು ಲವ್ ಮಾಡುತ್ತಿದ್ದ. ಕಳೆದ ಕೆಲವು ದಿನಗಳಿಂದ ಮೃತ ಶಬ್ಬೀರ್‌ನ ಪೋನ್ ನಂಬರ್‌ನ್ನು ಆ ಹುಡುಗಿ ಬ್ಲಾಕ್ ಮಾಡಿದ್ದಳಂತೆ. ಜೊತೆಗೆ ಸರಿಯಾಗಿ ರೆಸ್ಪಾನ್ಸ್ ಮಾಡಿರಲಿಲ್ಲವಂತೆ. ಹೀಗಾಗಿ ಇದರಿಂದ ಮನನೊಂದು ನೇಣಿಗೆ ಶರಣಾಗಿದ್ದಾನೆ ಎಂದು ಪೊಲೀಸರು ಶಂಕಿಸಿದ್ದಾರೆ.

Related articles

Comments

ಇತರರಿಗೂ ಹಂಚಿ

Latest articles

Newsletter

error: Content is protected !!