ಹೊಸದಿಗಂತ ಡಿಜಿಟಲ್ ಡೆಸ್ಕ್:
ನನ್ನ ಮತ್ತು ಡಿ.ಕೆ. ಶಿವಕುಮಾರ್ ಮಧ್ಯೆ ಯಾವ ಆತ್ಮೀಯತೆಯೂ ಇಲ್ಲ, ವ್ಯವಹಾರವೂ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದ್ದಾರೆ.
ದೆಹಲಿಯಲ್ಲಿ ರಾಷ್ಟ್ರೀಯ ನಾಯಕರನ್ನು ಭೇಟಿ ಮಾಡಿ ನಂತರ ಇಂದು ಬೆಳಗ್ಗೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಾತನಾಡಿದ್ದಾರೆ. ಪರಿಷತ್ ಚುನಾವಣೆಯಲ್ಲಿ ನಡೆದ ಅಡ್ಡಮತದಾನದ ಬೆನ್ನಲ್ಲೇ ಕೇಳಿಬರುತ್ತಿರುವ ಆರೋಪಗಳಿಗೆ ಉತ್ತರಿಸಿದ ಅವರು, ಅಡ್ಡ ಮತದಾನ ನಡೆದಾಗ ಅದಕ್ಕೆ ನಾನೇ ಕಾರಣ ಎಂಬ ಚರ್ಚೆಗಳನ್ನು ಸೃಷ್ಟಿಸಲಾಗುತ್ತಿದೆ.
ರಾಜ್ಯದ ಬಿಜೆಪಿ ಅಧ್ಯಕ್ಷರು ಮತ್ತು ರಾಜ್ಯದ ಮುಖ್ಯಮಂತ್ರಿಗಳು ಜೊತೆಯಾಗಿದ್ದಾರೆ ಎಂಬ ಅಪಪ್ರಚಾರ ಮಾಡಲಾಗುತ್ತಿದೆ. ಆದರೆ ಡಿ.ಕೆ. ಶಿವಕುಮಾರ್ ಮತ್ತು ನನ್ನ ಮಧ್ಯೆ ಯಾವುದೇ ವ್ಯವಹಾರವಿಲ್ಲ. ನನ್ನ ವಿರುದ್ಧ ಯಾರು ಅಪಪ್ರಚಾರ ಮಾಡುತ್ತಿದ್ದಾರೋ, ಅವರಿಗೆ ಆ ಭಗವಂತನೇ ಒಳ್ಳೆಯ ಬುದ್ಧಿ ಕೊಡಲಿ ಎಂದು ಮಂಜುನಾಥ ಸ್ವಾಮಿಯಲ್ಲಿ ಪ್ರಾರ್ಥಿಸಿದ್ದೇನೆ ಎಂದು ತಿರುಗೇಟು ನೀಡಿದರು.



