June 26, 2026
Friday, June 26, 2026
spot_img

ರಾಮ ಮಂದಿರ ದೇಣಿಗೆ ಹಗರಣ: ಚಂಪತ್ ರಾಯ್ ಆಪ್ತ ಸಹಾಯಕ ಸೇರಿ 8 ಮಂದಿ ಅರೆಸ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಯೋಧ್ಯೆಯ ಶ್ರೀ ರಾಮ ಮಂದಿರದ ಕಾಣಿಕೆ ಮತ್ತು ದೇಣಿಗೆ ಹಣದ ಕಳ್ಳತನದ ಆರೋಪಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ (SIT) ಶುಕ್ರವಾರ ಭಾರಿ ಕಾರ್ಯಾಚರಣೆ ನಡೆಸಿದ್ದು, ಪ್ರಕರಣದ ಪ್ರಮುಖ 8 ಆರೋಪಿಗಳನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ.

ಚಂಪತ್ ರಾಯ್ ಆಪ್ತ ಸಹಾಯಕನೂ ಅರೆಸ್ಟ್!

ಬಂಧಿತರಲ್ಲಿ ರಾಮ ಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಅವರ ಆಪ್ತ ಸಹಾಯಕ (PA) ರಾಮಶಂಕರ್ ಯಾದವ್ ಅಲಿಯಾಸ್ ಟಿನ್ನು ಯಾದವ್ ಸೇರಿರುವುದು ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿದೆ. ಇವನೊಂದಿಗೆ ಅನುಕಲ್ಪ್ ಮಿಶ್ರಾ, ಅವಿನಾಶ್ ಶುಕ್ಲಾ, ಕರುಣೇಶ್ ಪಾಂಡೆ ಸೇರಿದಂತೆ ಒಟ್ಟು ಎಂಟು ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಆರೋಪಿಗಳೆಲ್ಲರೂ ದೇವಸ್ಥಾನದ ಕಾಣಿಕೆ ಹಣ ಎಣಿಕೆ ಮಾಡುವ ತಂಡದಲ್ಲಿದ್ದರು ಎನ್ನಲಾಗಿದೆ.

ಸಿಸಿಟಿವಿ ಸಾಕ್ಷ್ಯ ಹಾಗೂ ಬಿಎನ್‌ಎಸ್ ಅಡಿ ಕೇಸ್

ದೇವಸ್ಥಾನದ ಒಳಗಿನ ಸಿಸಿಟಿವಿ ದೃಶ್ಯಾವಳಿ ಹಾಗೂ ವಿಧಿವಿಜ್ಞಾನ ಪುರಾವೆಗಳ ಆಧಾರದ ಮೇಲೆ, ಭಾರತೀಯ ನ್ಯಾಯ ಸಂಹಿತೆಯ (BNS) ವಿವಿಧ ಕಠಿಣ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಾದ ಕೇವಲ 24 ಗಂಟೆಗಳಲ್ಲಿ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ. ಸದ್ಯಕ್ಕೆ ಚಂಪತ್ ರಾಯ್ ಅಥವಾ ಟ್ರಸ್ಟ್‌ನ ಸದಸ್ಯ ಅನಿಲ್ ಮಿಶ್ರಾ ವಿರುದ್ಧ ಯಾವುದೇ ಎಫ್‌ಐಆರ್ ದಾಖಲಾಗಿಲ್ಲ. ಮುಂಬರುವ ದಿನಗಳಲ್ಲಿ ಇನ್ನಷ್ಟು ಮಂದಿ ಬಂಧನವಾಗುವ ಸಾಧ್ಯತೆಯಿದೆ.

ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ: ಯೋಗಿ ಸರ್ಕಾರ ಎಚ್ಚರಿಕೆ

ಈ ಘಟನೆ ಮುಂಬರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೂ ಮುನ್ನ ಭಾರಿ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಯುಪಿ ಹಣಕಾಸು ಸಚಿವ ಸುರೇಶ್ ಖನ್ನಾ, “ಇದು ಸಿಎಂ ಯೋಗಿ ಆದಿತ್ಯನಾಥ್ ಅವರ ಸರ್ಕಾರ. ಅಪರಾಧಗಳ ವಿರುದ್ಧ ನಮ್ಮದು ‘ಶೂನ್ಯ ಸಹಿಷ್ಣುತೆ’ ನೀತಿ. ರಾಮ ಮಂದಿರದ ಪವಿತ್ರ ದೇಣಿಗೆಯಲ್ಲಿ ಅವ್ಯವಹಾರ ನಡೆಸಿದ ಯಾರನ್ನೂ ಬಿಡುವ ಪ್ರಶ್ನೆಯೇ ಇಲ್ಲ” ಎಂದು ಕಠಿಣ ಎಚ್ಚರಿಕೆ ನೀಡಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !