June 26, 2026
Friday, June 26, 2026
spot_img

ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್‌: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಶಾಲಾ ಮಕ್ಕಳಿಗೆ ಶಿಕ್ಷಣ ಇಲಾಖೆ ಸಿಹಿಸುದ್ದಿ ನೀಡಿದ್ದು, ಇನ್ನು ಮುಂದೆ ಶನಿವಾರ ಶಾಲೆಗಳ ಸಮಯ ಬದಲಾಗಲಿದೆ.

ಇಡೀ ರಾಜ್ಯದಲ್ಲಿ ಒಂದೇ ರೀತಿಯ ಸಮಯ ಇರಲಿದೆ. ಬೆಳಗ್ಗೆ 8.30ರಿಂದ ಮಧ್ಯಾಹ್ನ 12.30ರವರೆಗೆ ತರಗತಿಗಳು ನಡೆಯಲಿವೆ. ರಾಜ್ಯದ ಜಿಲ್ಲೆಗಳಲ್ಲಿ ಒಂದೊಂದು ಕಡೆ ಒಂದೊಂದು ಸಮಯಕ್ಕೆ ಶಾಲೆಯ ಬೆಲ್‌ ಹೊಡೆಯುತ್ತಿತ್ತು. ಆದರೆ ಇದೀಗ ಎಲ್ಲ ಶಾಲೆಗಳು ಒಂದೇ ಸಮಯಕ್ಕೆ ಆರಂಭವಾಗಿ ಒಂದೇ ಸಮಯಕ್ಕೆ ಅಂತ್ಯವಾಗಲಿದೆ.

ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳು ಒಂದೇ ಸಮಯವನ್ನು ಪಾಲಿಸಬೇಕು ಎಂದು ಸೂಚನೆ ನೀಡಿದೆ. ಈ ಹೊಸ ವೇಳೆಯಿಂದ ವಿದ್ಯಾರ್ಥಿಗಳು ಶನಿವಾರ ಬೆಳಗ್ಗೆ ತುಂಬಾ ಬೇಗ ಎದ್ದು ಶಾಲೆಗೆ ಹೋಗುವ ಅಗತ್ಯ ಇರುವುದಿಲ್ಲ.

ಶಿಕ್ಷಕರಿಗೂ ಈ ಬದಲಾವಣೆ ಅನುಕೂಲವಾಗಲಿದೆ. ಸರ್ಕಾರ ಈಗಾಗಲೇ ಆನ್‌ಲೈನ್ ಹಾಜರಾತಿಯನ್ನು ಕಡ್ಡಾಯಗೊಳಿಸಿದೆ. ಸಮಯಕ್ಕೆ ಸರಿಯಾಗಿ ಹಾಜರಾತಿ ದಾಖಲಿಸಲು ಹೊಸ ವೇಳೆ ಸಹಾಯವಾಗಲಿದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !