June 26, 2026
Friday, June 26, 2026
spot_img

ತಾತನನ್ನು ಆಂಬುಲೆನ್ಸ್‌ನಲ್ಲಿ ಕಳಿಸಿ ರಸ್ತೆಯಲ್ಲಿ ನಿಂತಿದ್ದ ಬಾಲಕನಿಗೆ ವೇಗವಾಗಿ ಬಂದು ಡಿಕ್ಕಿ ಹೊಡೆದ ಕಾರು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಅಪಘಾತದಲ್ಲಿ ಗಾಯಗೊಂಡಿದ್ದ ತನ್ನ ಅಜ್ಜನನ್ನು ಆಂಬ್ಯುಲೆನ್ಸ್‌ಲ್ಲಿ ಕರೆದೊಯ್ಯುವುದನ್ನು ನೋಡುತ್ತಾ ನಿಂತಿದ್ದ ಬಾಲಕನಿಗೆ ಕಾರು ಡಿಕ್ಕಿಯಾಗಿದೆ!

ಹೌದು, ಸಕಲೇಶಪುರದ ಬಾಳೆಗದ್ದೆ ಗ್ರಾಮದ ಸಮೀಪ ಈ ದುರ್ಘಟನೆ ನಡೆದಿದ್ದು, ಬಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ. ಈ ಭೀಕರ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ನೋಡಿದರೆ ಮೈ ಜುಂ ಎನಿಸುವಂತಿದೆ.

ಭವಿಷ್ (16) ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಬಾಲಕ. ಭವಿಷ್‌ನ ಅಜ್ಜ ಸಿದ್ದರಾಜು ಅವರಿಗೆ ಬೈಕ್ ಡಿಕ್ಕಿಯಾಗಿ, ಗಾಯಗೊಂಡಿದ್ದರು. ಅವರನ್ನು ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿತ್ತು. ಈ ವೇಳೆ ತಾತನಿದ್ದ ಆಂಬ್ಯುಲೆನ್ಸ್‌ ಹೋಗುವುದನ್ನು ನೋಡುತ್ತಿದ್ದ ಬಾಲಕನಿಗೆ ಕಾರು ಡಿಕ್ಕಿಯಾಗಿದೆ. ಅಪಘಾತದ ಬಳಿಕ ಚಾಲಕ ಕಾರನ್ನು ನಿಲ್ಲಿಸದೇ ಅಲ್ಲಿಂದ ತೆರಳಿದ್ದಾನೆ. 

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !