June 27, 2026
Saturday, June 27, 2026
spot_img

ಇಡೀ ಆರೋಗ್ಯ ಇಲಾಖೆನೇ ಐಸಿಯು ಕೈಯಲ್ಲಿದೆ, ಸರಿಯಾಗಿ ಸಂಬಳ ಕೊಡೋಕಾಗೋದಿಲ್ವಾ? ಆರ್‌. ಅಶೋಕ್‌ ಗರಂ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜ್ಯದಲ್ಲಿ ಆರೋಗ್ಯ ಇಲಾಖೆಯ ಅವ್ಯವಸ್ಥೆ ವಿರುದ್ಧ ವಿಪಕ್ಷ ನಾಯಕ ಆರ್‌. ಅಶೋಕ್‌ ಮಾತನಾಡಿದ್ದಾರೆ.

ರಾಜ್ಯದಲ್ಲಿ ಮುಖ್ಯಮಂತ್ರಿಗಳು, ಆರೋಗ್ಯ ಸಚಿವರು ಹಾಗೂ ಸರ್ಕಾರ ಬದಲಾದರೂ ಸಹ ಆರೋಗ್ಯ ಇಲಾಖೆಯ ಹಣೆಬರಹ ಮಾತ್ರ ಬದಲಾಗಿಲ್ಲ ಎಂದು ಅಶೋಕ್ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯ, ಅಸಮರ್ಥತೆ ಮತ್ತು ಜನವಿರೋಧಿ ನೀತಿಗಳಿಂದಾಗಿ ಸಾರ್ವಜನಿಕ ಆರೋಗ್ಯ ಕ್ಷೇತ್ರ ಸಂಪೂರ್ಣ ಹದಗೆಟ್ಟಿದೆ. ಜೀವ ಉಳಿಸಬೇಕಾದ ಇಲಾಖೆಯಲ್ಲೇ ಬರೋಬ್ಬರಿ 35,196 ಹುದ್ದೆಗಳು ಖಾಲಿ ಇವೆ ಎಂದು ಅವರು ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಸರ್ಕಾರಿ ಆಸ್ಪತ್ರೆಗಳು ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ. ಆದರೆ ಇಲ್ಲಿರೋದು ಬರೀ ಸಮಸ್ಯೆ ಅಷ್ಟೆ. ರಾತ್ರಿ ಎಮರ್ಜೆನ್ಸಿ ಅಂತ ಆಸ್ಪತ್ರೆಗೆ ಬರುವವರಿಗೆ ಕ್ಯಾರೇ ಅನ್ನೋದಿಲ್ಲ. ಕನಿಷ್ಠ ಪ್ಯಾರಾಸಿಟಮಾಲ್ ಮಾತ್ರೆಗಳೂ ಸಿಗದೆ ಬಡ ರೋಗಿಗಳು ಆಸ್ಪತ್ರೆಯಿಂದ ಆಸ್ಪತ್ರೆಗೆ ಅಲೆದಾಡುವ ದುಸ್ಥಿತಿ ಎದುರಾಗಿದೆ ಎಂದಿದ್ದಾರೆ. ಇನ್ನು ನಮ್ಮ ಕ್ಲಿನಿಕ್‌ ಸಿಬ್ಬಂದಿಗೆ ಮೂರು ತಿಂಗಳಿನಿಂದ ಸಂಬಳ ಇಲ್ಲ. ಹಗಲು ರಾತ್ರಿ ನೋಡದೇ ಕೆಲಸ ಮಾಡೋರಿಗೆ ತಮ್ಮದೇ ಆದ ಲೈಫ್‌ ಇರೋದಿಲ್ವಾ? ಸಂಬಳ ಕೊಟ್ಟಿಲ್ಲ ಅಂದ್ರೆ ಹೇಗೆ? ದುಡಿಯುವ ಕೈಗಳಿಗೆ ಸಂಬಳ ಕೊಡಲೂ ಸಾಧ್ಯವಾಗದ ಸರ್ಕಾರಕ್ಕೆ ಅಧಿಕಾರದಲ್ಲಿ ಮುಂದುವರಿಯುವ ನೈತಿಕ ಹಕ್ಕಾದರೂ ಇದೆಯೇ ಎಂದು ಅವರು ಪ್ರಶ್ನಿಸಿದ್ದಾರೆ. ಗ್ಯಾರಂಟಿಗಳ ಹೆಸರಲ್ಲಿ ಖಜಾನೆ ಖಾಲಿ ಮಾಡಿ, ಈಗ ಆರೋಗ್ಯ ಇಲಾಖೆಯನ್ನೇ ಐಸಿಯು ಅಲ್ಲಿ ಇರಿಸುವ ಪರಿಸ್ಥಿತಿ ತಂದಿರುವುದೇ ಕಾಂಗ್ರೆಸ್ ಸರ್ಕಾರದ ನಿಜವಾದ ಸಾಧನೆ ಎಂದು ಅವರು ವ್ಯಂಗ್ಯವಾಡಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !