September 4, 2026
Friday, September 4, 2026
spot_img

ಪಾವಗಡದಲ್ಲಿ ಪ್ರಸಾದ ತಂದಿಟ್ಟ ಮಹಾ ಆಪತ್ತು: ವಿಷಪೂರಿತ ಆಹಾರ ಸೇವಿಸಿ 40ಕ್ಕೂ ಹೆಚ್ಚು ಭಕ್ತರು ಅಸ್ವಸ್ಥ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ತುಮಕೂರಿನ ಪಾವಗಡ ತಾಲೂಕಿನ ಗ್ರಾಮವೊಂದರ ದೇವಸ್ಥಾನದಲ್ಲಿ ಆಯೋಜಿಸಲಾಗಿದ್ದ ವಿಶೇಷ ಪೂಜಾ ಕಾರ್ಯಕ್ರಮದ ಬಳಿಕ ಭಕ್ತರಿಗೆ ವಿತರಿಸಲಾಗಿದ್ದ ಅನ್ನಪ್ರಸಾದ ಸೇವಿಸಿದ 40 ಜನ ಅಸ್ವಸ್ಥಗೊಂಡಿದ್ದು, ಪಾವಗಡ ಸರ್ಕಾರಿ ಆಸ್ಪತ್ರೆಗೆ ರೋಗಿಗಳನ್ನು ದಾಖಲಿಸಲಾಗಿದೆ.

ಧಿಡೀರ್ ಕಾಣಿಸಿಕೊಂಡ ಲಕ್ಷಣಗಳು:

ದೇವಸ್ಥಾನದಲ್ಲಿ ಪ್ರಸಾದ ಸೇವಿಸಿ ಮನೆಗೆ ಮರಳಿದ್ದ ಭಕ್ತರಿಗೆ ತಡರಾತ್ರಿಯಿಂದ ತೀವ್ರವಾದ ಹೊಟ್ಟೆನೋವು, ವಾಂತಿ, ತಲೆಸುತ್ತು ಮತ್ತು ಭೇದಿಯ ಲಕ್ಷಣಗಳು ಕಾಣಿಸಿಕೊಂಡಿವೆ. ಅಸ್ವಸ್ಥಗೊಂಡ 40ಕ್ಕೂ ಹೆಚ್ಚು ಜನರಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಹಾಗೂ ಚಿಕ್ಕ ಮಕ್ಕಳೇ ಇದ್ದಾರೆ. ಎಲ್ಲರನ್ನೂ ಮೂಲಕ ಪಾವಗಡ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ಸದ್ಯಕ್ಕೆ ಯಾರಿಗೂ ಪ್ರಾಣಾಪಾಯವಿಲ್ಲ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

ಇದನ್ನೂ ಓದಿ:

ಅಧಿಕಾರಿಗಳ ಭೇಟಿ – ತನಿಖೆಗೆ ಆದೇಶ:

ವಿಷಯ ತಿಳಿಯುತ್ತಿದ್ದಂತೆ ತಾಲೂಕು ಆರೋಗ್ಯ ಅಧಿಕಾರಿಗಳು ಮತ್ತು ಸ್ಥಳೀಯ ಪೊಲೀಸರು ಪಾವಗಡ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ರೋಗಿಗಳ ಆರೋಗ್ಯ ವಿಚಾರಿಸಿದ್ದಾರೆ. ಪ್ರಸಾದ ತಯಾರಿಸಲು ಬಳಸಲಾಗಿದ್ದ ಧಾನ್ಯಗಳು ಹಾಗೂ ಕುಡಿಯುವ ನೀರಿನಲ್ಲಿ ಏನಾದರೂ ವ್ಯತ್ಯಾಸವಾಗಿದೆಯೇ ಎಂಬ ಬಗ್ಗೆ ತನಿಖೆ ಆರಂಭವಾಗಿದ್ದು, ದೇವಸ್ಥಾನದಲ್ಲಿದ್ದ ಆಹಾರದ ಸ್ಯಾಂಪಲ್‌ಗಳನ್ನು ಸಂಗ್ರಹಿಸಿ ಲ್ಯಾಬೊರೇಟರಿ ಪರೀಕ್ಷೆಗೆ ಕಳುಹಿಸಲು ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !